Saturday, September 12, 2026

BDA Apartments

ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ BDA JK_...
Home Front Page ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ.

ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ.

ಚಿಕ್ಕೋಡಿ,ಮಾರ್ಚ್,28,2022(www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆ .ಆರಂಭವಾದ ಮೊದಲ ದಿನವೇ  6 ನಕಲಿ ವಿದ್ಯಾರ್ಥಿಗಳನ್ನು  ಬಂಧಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್ ಡಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ರಾಹುಲ್, ಭೀಮಶಿ ಹುಲಕುಂದ, ಕಾರ್ತಿಕ್ ಲಚ್ಚಪ್ಪ ಕುಂಬಾರ್, ಸಿದ್ಧು ಮಾದೇವ್ ಜೋಗಿ, ಮಾಂತೇಶ್ ಸಂಗಪ್ಪ ಡೊಳ್ಳಿನವರ ಹಾಗೂ ಸವೀತಾ ಮಾದೇವ ಹೊಸೂರು  ಬಂಧಿತ ವಿದ್ಯಾರ್ಥಿಗಳು.ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ dasdsd

ಐವರು ವಿದ್ಯಾರ್ಥಿಗಳು ಮತ್ತು ಓರ್ವ ವಿದ್ಯಾರ್ಥಿನಿ ಅಸಲಿ ಅಭ್ಯರ್ಥಿಗಳ ಬದಲಾಗಿ ಪರೀಕ್ಷೆಗೆ ಹಾಜರಾಗಿದ್ದರು. ನಕಲಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ಪರಿಶೀಲನೆ ವೇಳೆ ಸಿಕ್ಕಿ ಬಿದ್ದಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು,  ಪೊಲೀಸರು 6 ನಕಲಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

Key words: 6 fake -students -arrested – SSLC examination