Tuesday, September 22, 2026

BDA Apartments

ಯುಗಾದಿ ಹಬ್ಬದ ಸಂಭ್ರಮ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾದ ...
Home Front Page ಯುಗಾದಿ ಹಬ್ಬದ ಸಂಭ್ರಮ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾದ ಸಾವಿರಾರು ಭಕ್ತರು.

ಯುಗಾದಿ ಹಬ್ಬದ ಸಂಭ್ರಮ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾದ ಸಾವಿರಾರು ಭಕ್ತರು.

ಮೈಸೂರು,ಏಪ್ರಿಲ್,2,2022(www.justkannada.in):  ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮವಾಗಿದ್ದು, ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿನ ತ್ರಿವೇಣಿ ಸಂಗಮಕ್ಕೆ ಸಾವಿರಾರು ಭಕ್ತರು ಆಗಮಿಸಿ ಪುಣ್ಯಸ್ನಾನ ಸ್ನಾನ ಮಾಡಿ ಪುನೀತರಾದರು.

ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಸ್ಥಗಿತಗೊಂಡಿತ್ತು. ಹೀಗಾಗಿ ಎರಡು ವರ್ಷಗಳ ಬಳಿಕ ತ್ರಿವೇಣಿ ಸಂಗಮದಲ್ಲಿ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ವಿವಿಧ ಗ್ರಾಮದ ದೇವರ ವಿಗ್ರಹಗಳನ್ನ ತಂದು ಪೂಜೆ ಸಲ್ಲಿಸುವುದು, ಕಪ್ಪಡಿ ಜಾತ್ರೆ,ಬೋಪ್ಪೆಗೌಡನಪುರ ಮಠಕ್ಕೆ ಭೇಟಿ ನೀಡಿ ನಂತರ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುವುದು ವಾಡಿಕೆಯಾಗಿದೆ.ಯುಗಾದಿ ಹಬ್ಬದ ಸಂಭ್ರಮ dsasdsf

ಈ ಹಿನ್ನೆಲೆಯಲ್ಲಿ ಇಂದು ಯುಗಾದಿ ಹಬ್ಬದ ಸಂಭ್ರಮ ಹಿನ್ನೆಲೆ ಮೈಸೂರು,ಚಾಮರಾಜನಗರ, ಮಂಡ್ಯ ಭಾಗದಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ತಾಲ್ಲೂಕು ಆಡಳಿತ ವತಿಯಿಂದ ತಾತ್ಕಾಲಿಕ ಸ್ನಾನದ ಕೊಠಡಿ ಹಾಗೂ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲೀಸ್ ಇಲಾಖೆ ಬಂದೋಬಸ್ತ್ ವ್ಯವಸ್ಥೆ ಮಾಡಿದೆ.

Key words: ugadi Festival-Mysore-T.Narasipur-thriveni sangama