Sunday, August 2, 2026

BDA Apartments

Home Front Page ಮಸೀದಿಗಳಲ್ಲಿನ ಧ್ವನಿವರ್ಧಕಗಳನ್ನು ತೆಗೆಸುವಂತೆ ರಾಜ್ ಠಾಕ್ರೆ ಒತ್ತಾಯ

ಮಸೀದಿಗಳಲ್ಲಿನ ಧ್ವನಿವರ್ಧಕಗಳನ್ನು ತೆಗೆಸುವಂತೆ ರಾಜ್ ಠಾಕ್ರೆ ಒತ್ತಾಯ

ಬೆಂಗಳೂರು, ಏಪ್ರಿಲ್ 03, 2022 (www.justkannada.in): ಮಸೀದಿಗಳಲ್ಲಿನ ಧ್ವನಿವರ್ಧಕಗಳನ್ನು ತೆಗೆಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಆಗ್ರಹಿಸಿದ್ದಾರೆ.

ನಾನು ಮಸೀದಿಗಳಲ್ಲಿನ ಪ್ರಾರ್ಥನೆಯನ್ನು ವಿರೋಧಿಸಲ್ಲ ಅಥವಾ ಯಾವುದೇ ಧರ್ಮದ ವಿರೋಧಿಯೂ ಅಲ್ಲ ಆದರೆ ಮಸೀದಿಗಳಲ್ಲಿನ ಧ್ವನಿವರ್ಧಕಗಳಿಂದ ತೊಂದರೆಯಾಗುತ್ತಿದೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.

ಅನಗತ್ಯವಾಗಿ ಅಷ್ಟು ಜೋರಾಗಿ ಪ್ರಾರ್ಥನೆ ಮಾಡುವುದು ಯಾಕೆ ? ಇದರಿಂದ ಸಮಸ್ಯೆಯಾಗುತ್ತಿದೆ. ತಕ್ಷಣ ರಾಜ್ಯ ಸರ್ಕಾರ ಮಸೀದಿಗಳಲ್ಲಿನ ಧ್ವನಿವರ್ಧಕಗಳನ್ನು ತೆಗೆಸಬೇಕು. ಇಲ್ಲವಾದಲ್ಲಿ ನಾವು ಮಸೀದಿ ಹೊರಗಡೆ ಧ್ವನಿವರ್ಧಕ ಅಳವಡಿಸಿ ಅಲ್ಲಿ ಹನುಮಾನ್ ಚಾಲೀಸ್ ಶ್ಲೋಕ ಹಾಕುತ್ತೇವೆ ಎಂದಿದ್ದಾರೆ.