Wednesday, October 7, 2026

BDA Apartments

immense respect BDA JK_Adv BDA Adv
Home Cinema ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ನಿಧನ

ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ನಿಧನ

ಬೆಂಗಳೂರು. ಮೇ 10, 2022 (www.justkannada.in): ಖ್ಯಾತ ಸಂಗೀತಗಾರ ಮತ್ತು ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ಎರಡು ವರ್ಷಗಳಿಂದ , ಕರೋನವೈರಸ್ ಹಿನ್ನೆಲೆಯಲ್ಲಿ, ಪಂಡಿತ್ ಶಿವಕುಮಾರ್ ಶರ್ಮಾ ತಮ್ಮ ನಿವಾಸದಿಂದ ಅಷ್ಟೇನೂ ಹೊರ ಬಂದಿರಲಿಲ್ಲ.

ಪಂಡಿತ್ ಶಿವಕುಮಾರ್ ಶರ್ಮಾ ಅವರು ಕಳೆದ ಆರು ತಿಂಗಳಿನಿಂದ ಕಿಡ್ನಿ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಡಯಾಲಿಸಿಸ್‌ಗೂ ಒಳಗಾಗಿದ್ದರು. ಅಂತ್ಯಕ್ರಿಯೆ ಇಂದು ಸಂಜೆ ನಡೆಯಲಿದೆ ಎನ್ನಲಾಗಿದೆ.

ಜಮ್ಮುವಿನಲ್ಲಿ ಜನಿಸಿದ ಪಂಡಿತ್ ಶಿವಕುಮಾರ್ ಶರ್ಮಾ ಅವರು ಹದಿಮೂರನೆಯ ವಯಸ್ಸಿನಲ್ಲಿ ಸಂತೂರ್ ಕಲಿಯಲು ಪ್ರಾರಂಭಿಸಿದರು. ಅರು 1955ರಲ್ಲಿ ಮುಂಬೈನಲ್ಲಿ ಮೊದಲ ಸಾರ್ವಜನಿಕ ಪ್ರದರ್ಶನ ಣಿಡಿ ಜನರ ಮೆಚ್ಚುಗೆಗ ಪಾತ್ರವಾಗಿದ್ದರು.