Wednesday, August 12, 2026

BDA Apartments

Home Front Page ಆರ್’ಎಸ್’ಎಸ್ ಪ್ರಶ್ನಿಸಿದರೆ ಬಿಜೆಪಿ ನಾಯಕರೇಕೆ ಎದೆ ಬಡಿದುಕೊಳ್ಳುತ್ತಿದ್ದಾರೆ!? ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ

ಆರ್’ಎಸ್’ಎಸ್ ಪ್ರಶ್ನಿಸಿದರೆ ಬಿಜೆಪಿ ನಾಯಕರೇಕೆ ಎದೆ ಬಡಿದುಕೊಳ್ಳುತ್ತಿದ್ದಾರೆ!? ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ

ಬೆಂಗಳೂರು, ಮೇ 29, 2022 (www.justkannada.in): ನಾನು ಪ್ರಶ್ನೆ ಮಾಡಿದ್ದು ಆರ್’ಎಸ್‌ಎಸ್ ಎಂಬ ಸಂಸ್ಥೆಯನ್ನು, ಆದರೆ ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ನಾನು ಆರ್’ಎಸ್‌ಎಸ್ ಎಂಬ ಸಂಸ್ಥೆಯನ್ನು  ಪ್ರಶ್ನೆ ಮಾಡಿದರೆ ಬಿಜೆಪಿಯವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಆರ್.ಎಸ್.ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಅವರೇ ಉತ್ತರಿಸಲಿ. ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿ ಬಂದಂತೆ ಮಾತನಾಡುತ್ತಿರುವ ಆರ್.ಎಸ್.ಎಸ್ ನಾಯಕರು ಬೆಂಬಲಿಸುತ್ತಿರುವುದು ಮಾತ್ರ ಬಿಜೆಪಿ ಎಂಬ ರಾಜಕೀಯ ಪಕ್ಷವನ್ನು ಎಂದು ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು? ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಎಂದು ಸಿದ್ದು ಪ್ರಶ್ನಿಸಿದ್ದಾರೆ.