Thursday, October 1, 2026

BDA Apartments

Welcome to Just Kannada Online News Portal BDA JK_Adv BDA Adv
Home Front Page ಉತ್ತರ ಕರ್ನಾಟಕದಾದ್ಯಂತ ಪ್ರವಾಹ ಹಿನ್ನೆಲೆ: ಸಿಎಂ ಬಿಎಸ್ ಯಡಿಯೂರಪ್ಪ ತುರ್ತು ಸಭೆ

ಉತ್ತರ ಕರ್ನಾಟಕದಾದ್ಯಂತ ಪ್ರವಾಹ ಹಿನ್ನೆಲೆ: ಸಿಎಂ ಬಿಎಸ್ ಯಡಿಯೂರಪ್ಪ ತುರ್ತು ಸಭೆ

ಬೆಳಗಾವಿ,ಆ,8,2019(www.justkannada.in): ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದಾದ್ಯಂತ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆ  ಸಿಎಂ ಬಿಎಸ್ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರದ ಐಬಿಯಲ್ಲಿ  ಸಿಎಂ ಬಿಎಸ್ ಯಡಿಯೂರಪ್ಪ ತುರ್ತು ಸಭೆ ನಡೆಸುತ್ತಿದ್ದಾರೆ.  ಸಭೆಯಲ್ಲಿ ಕೇಂದ್ರ ಸಚಿವ  ಸುರೇಶ್ ಅಂಗಡಿ ಮತ್ತು ಡಿಸಿ ಸೇರಿದಂತೆ ಹಲವರು ಉಪಸ್ಥಿತರಿದ್ದು. ರಕ್ಷಣಾ ಕಾರ್ಯಾಚರಣೆ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

ರಕ್ಷಣಾ ಕಾರ್ಯಾಚರಣೆಗೆ ಎಷ್ಟು ಸಿಬ್ಬಂದಿ ಅವಶ್ಯಕತೆ ಇದೆ. ಹಾಗೂ ಕೇಂದ್ರ ಸರ್ಕಾರದಿಂದ ಯಾವ ರೀತಿ ನೆರವು ಪಡೆದುಕೊಳ್ಳಬೇಕು ಎಂಬುದನ್ನ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧರಿಸಲಿದ್ದಾರೆ. ಮಹಾರಾಷ್ಟ್ರದ ಕೊಯ್ನಾ ಡ್ಯಾಂನಿಂದ ಮತ್ತೆ 5 ಲಕ್ಷ ಕ್ಯೂಸೆಕ್ಸ್ ನೀರನ್ನ ಕೃಷ್ಣಾನದಿಗೆ ಬಿಟ್ಟ ಹಿನ್ನೆಲೆ ತುರ್ತು ಸಭೆ ನಡೆಸುತ್ತಿದ್ದಾರೆ.

Key words: Flood –north Karnataka- CM BS Yeddyurappa -Emergency -Meeting