Wednesday, July 29, 2026

BDA Apartments

Home Front Page ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಜೂನ್ 27ಕ್ಕೆ ಸಿಎಂ ನಿವಾಸಕ್ಕೆ ಮುತ್ತಿಗೆ : ಬಸವ...

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಜೂನ್ 27ಕ್ಕೆ ಸಿಎಂ ನಿವಾಸಕ್ಕೆ ಮುತ್ತಿಗೆ : ಬಸವ ಜಯಮೃತ್ಯುಂಜಯ ಸ್ವಾಮೀಜಿ.

ಬೆಂಗಳೂರು,ಜೂನ್,6,2022(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿge  ಆಗ್ರಹಿಸಿ ಜೂನ್ 27 ರಂದು ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು  ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮಗಳ ಜತೆ ಇಂದು ಮಾತನಾಡಿದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು,  ವಿಧಾನಮಂಡಲ ಅಧಿವೇಶನದಲ್ಲಿ ಭರವಸೆ ನೀಡಿದಂತೆ ಸರ್ಕಾರ ತಮ್ಮ ಬೇಡಿಕೆಯನ್ನು ಈವರೆಗೂ ಈಡೇರಿಸಿಲ್ಲ. ಹೀಗಾಗಿ ಜೂನ್ 27 ರಂದು ಶಿಗ್ಗಾಂವಿಯ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಿ ಮನೆಗೆ ಬೀಗ ಹಾಕಲಾಗುವುದು ಎಂದು ಹೇಳಿದರು.

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಬೇಕೆಂಬ ಬೇಡಿಕೆ ಇತ್ತು. ಹಲವು ದಿನಗಳಿಂದ ಪ್ರತಿಭಟನೆ, ಹೋರಾಟಗಳು ನಡೆದರೂ ಸರ್ಕಾರ ಆ ಬಗ್ಗೆ ಸ್ಪಂದನೆ ತೋರಿಲ್ಲ. ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಅವರು ಕೊಟ್ಟ ಮಾತು ತಪ್ಪಿದ್ದಾರೆ. ಹೀಗಾಗಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

Key words: 2A -reservation f- Panchamsali –community-CM residence-Basava Jayamritunjaya Swamiji.