Tuesday, September 22, 2026

BDA Apartments

ಜೂನ್ 13 ರಂದು ಬೆಂಗಳೂರಿಗೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಭೇಟಿ BDA JK_Adv BDA Adv
Home Front Page ಜೂನ್ 13  ರಂದು ಬೆಂಗಳೂರಿಗೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಭೇಟಿ.

ಜೂನ್ 13  ರಂದು ಬೆಂಗಳೂರಿಗೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಭೇಟಿ.

ಬೆಂಗಳೂರು, ಜೂನ್,6,2022(www.justkannada.in): ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಎರಡು-ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಜೂನ್  13 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ರಾಜ್ಯದ ರಾಜಧಾನಿಗೆ ತಲುಪಿರುವ ಪ್ರವಾಸ ವಿವರಗಳ ಪ್ರಕಾರ, ರಾಷ್ಟ್ರಪತಿ  ರಮನಾಥ್ ಕೋವಿಂದ್ ಅವರು ಸೋಮವಾರ ಬೆಳಿಗ್ಗೆ ಬೆಂಗಳೂರು ತಲುಪಲಿದ್ದಾರೆ.  ನಂತರ ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅಂದು ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಜೂನ್ 14  ರಂದು,  ಮಂಗಳವಾರ ಬೆಳಿಗ್ಗೆ, ಬೆಂಗಳೂರಿನ ಕನಕಪುರ ರಸ್ತೆ ಸಮೀಪದ ದೊಡ್ಡಕಲ್ಲಸಂದ್ರದ  ವೈಕುಂಠ ಬೆಟ್ಟದಲ್ಲಿ ತಿರುಪತಿ ತಿರುಮಲ ದೇವಾಲಯವನ್ನು ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣಾ ಸಮಾರಂಭದಲ್ಲಿ  ರಾಷ್ಟ್ರಪತಿ ರಮನಾಥ್ ಕೋವಿಂದ್ ಭಾಗವಹಿಸಲಿದ್ದಾರೆ.  ಅಲ್ಲದೆ, ಅದೇ ಮಧ್ಯಾಹ್ನ ಅವರು ದೆಹಲಿಗೆ ವಾಪಸ್ ತೆರಳಲಿದ್ದಾರೆ.

Key words: President-Ramanath Kovind -visits -Bangalore -June 13