Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಪೂರ್ಣ ಬೆಂಬಲ ನೀಡಲಿ- ಹೆಚ್.ಡಿಕೆ ಟ್ವೀಟ್.

ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಪೂರ್ಣ ಬೆಂಬಲ ನೀಡಲಿ- ಹೆಚ್.ಡಿಕೆ ಟ್ವೀಟ್.

ಬೆಂಗಳೂರು,ಜೂನ್,9,2022(www.justkannada.in): ರಾಜ್ಯಸಭೆ ಚುನಾವಣೆಗೆ ಒಂದು ದಿನ ಬಾಕಿ ಇದ್ದು, ಈ ಮಧ್ಯೆ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ತಿಕ್ಕಾಟ ಮುಂದುವರೆದಿದೆ. ಈ ಮಧ್ಯೆ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಕಾಂಗ್ರೆಸ್ ಪೂರ್ಣ ಬೆಂಬಲ ನೀಡಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ,  ಪಕ್ಷವು ಡಿ.ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಅವರು ಉದ್ದಿಮೆದಾರರು, ಸಮಾಜ ಸೇವಕರು ಮತ್ತು ಪ್ರಗತಿಪರ ಚಿಂತಕರು.

ರಾಜ್ಯಸಭೆ ಸದಸ್ಯರಾಗಿ ಅನುಭವವುಳ್ಳ ಅವರನ್ನು ಎಲ್ಲ ಪಕ್ಷಗಳು ಮುಕ್ತ ಮನಸ್ಸಿನಿಂದ ಬೆಂಬಲಿಸಬೇಕು. ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಕಾಂಗ್ರೆಸ್‌ ಪಕ್ಷ ಕುಪೇಂದ್ರ ರೆಡ್ಡಿ ಅವರಿಗೆ ಪೂರ್ಣ ಬೆಂಬಲ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್‌ ಅನ್ನು ಕಾಂಗ್ರೆಸ್‌ ಬೆಂಬಲಿಸಬೇಕು. ಈ ಚುನಾವಣೆಯ ಪರಿಣಾಮಗಳ ಬಗ್ಗೆ ಇತಿಹಾಸ & ಜನತೆ ಭವಿಷ್ಯದ ದಿನಗಳಲ್ಲಿ ನಿರ್ಧರಿಸುತ್ತಾರೆ ಎಂಬುದರಲ್ಲಿ ಸಂಶಯವಿಲ್ಲ. ಸುರ್ಜೇವಾಲ ಅವರು ಈ ಅಂಶ ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ. ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Key words: Congress -support – JDS candidate-HD Kumaraswamy