Sunday, August 23, 2026

BDA Apartments

Home Front Page ದೇಶದ ಹಲವೆಡೆ ಮುಸ್ಲೀಂರಿಂದ ಪ್ರತಿಭಟನೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ –ಸಿಎಂ ಬಸವರಾಜ ಬೊಮ್ಮಾಯಿ.

ದೇಶದ ಹಲವೆಡೆ ಮುಸ್ಲೀಂರಿಂದ ಪ್ರತಿಭಟನೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ –ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಜೂನ್,11,2022(www.justkannada.in):  ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಖಂಡಿಸಿ ದೇಶಾದ್ಯಂತ ಮುಸ್ಲಿಂರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಿನ್ನೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಎಲ್ಲಾ ಸಮುದಾಯದವರ ಜತೆ ಸಭೆ ನಡೆಸಲು ಸೂಚಿಸಲಾಗಿದೆ. ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳ ಸಭೆ ಕರೆದು ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ ಶಾಂತ ಪರಿಸ್ಥಿತಿ ಇದೆ.ಎಲ್ಲಾ ಸಮುದಾಯದ ನಾಯಕರು ಸೌಹಾರ್ದತೆ ಕಾಪಾಡಬೇಕೆಂದು ತಿಳಿಸಲಾಗಿದೆ ಎಂದು ಹೇಳಿದರು.

ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ,  ಆ್ಯಸಿಡ್ ದಾಳಿ ದುರದೃಷ್ಟಕರ ಆರೋಪಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಖಚಿತ. ರಾಜ್ಯದಲ್ಲಿ ಆ್ಯಸಿಡ್ ದಾಳಿಗಳು ಹೆಚ್ಚಾಗುತ್ತಿದ್ದು, ಆಯಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ರೂಪಿಸಲು ಕಾನೂನು ಸಚಿವರಿಗೆ ತಿಳಿಸಿದ್ದೇನೆ. ಉತ್ತರ ಪ್ರದೇಶದಂತ ಘಟನೆ ನಮ್ಮ ರಾಜ್ಯದಲ್ಲಿ ನಡೆದಿಲ್ಲ  ನಮ್ಮ ರಾಜ್ಯ ಶಾಂತಿಯುತವಾಗಿದೆ ಎಂದರು.

Key words: Protest -Muslims – country-CM Basavaraja Bommai.