Sunday, August 23, 2026

BDA Apartments

Home Front Page ವಿಧಾನ ಪರಿಷತ್ ಚುನಾವಣೆ: ನಾಳೆ ಪದವೀಧರ ಮತದಾರರಿಗೆ ಸಾಂದರ್ಭಿಕ ರಜೆ

ವಿಧಾನ ಪರಿಷತ್ ಚುನಾವಣೆ: ನಾಳೆ ಪದವೀಧರ ಮತದಾರರಿಗೆ ಸಾಂದರ್ಭಿಕ ರಜೆ

ಮೈಸೂರು, ಜೂನ್ 12, 2022 (www.justkannada.in): ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಲಾಗಿದೆ.

ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾಸಂಸ್ಥೆಗಳು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರದ ಸರ್ಕಾರಿ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯಾವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಸಾಂಧರ್ಬಿಕ ರಜೆ ನೀಡಲಾಗಿದೆ.

ಅರ್ಹ ಮತದಾರರಿಗೆ ಸೀಮಿತವಾದಂತೆ ಮತಚಲಾಯಿಸಲಿರುವ ಮತದಾರರಿಗೆ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರ – ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು., ಕರ್ನಾಟಕ ವಾಯುವ್ಯ ಕ್ಷೇತ್ರ ಶಿಕ್ಷಕರ ಕ್ಷೇತ್ರ- ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳು, *ಕರ್ನಾಟಕ ಪಶ್ಚಿಮ ಕ್ಷೇತ್ರ ಶಿಕ್ಷಕರ ಕ್ಷೇತ್ರ- ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು, ಇದರ ಅರ್ಥ ಕರ್ನಾಟಕದ ವಿಜಯಪುರ, ಬಾಗಲಕೋಟೆ , ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ , ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗಳು ನಡೆಯುತ್ತಿದೆ.