Sunday, August 23, 2026

BDA Apartments

Home Front Page ದೇಶದಲ್ಲಿ 4ನೇ ಅಲೆ ಭೀತಿ: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ದೇಶದಲ್ಲಿ 4ನೇ ಅಲೆ ಭೀತಿ: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ಬೆಂಗಳೂರು, ಜೂನ್ 12, 2022 (www.justkannada.in): ದೇಶದಲ್ಲಿ 4ನೇ ಅಲೆ ಭೀತಿಯ ನಡುವೆ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಾಗಿದೆ.

24 ಗಂಟೆಗಳ ಅವಧಿಯಲ್ಲಿ 8,582 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 04 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,22,017ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,761ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 44,513ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 4,435 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,52,743ಕ್ಕೆ ತಲುಪಿದೆ.