Tuesday, September 22, 2026

BDA Apartments

ರಾಜ್ಯದ ವಿವಿಧೆಡೆ ಜೂ.14ರವರೆಗೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ BDA JK_Adv BDA Adv
Home Front Page ರಾಜ್ಯದ ವಿವಿಧೆಡೆ ಜೂ.14ರವರೆಗೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಜೂ.14ರವರೆಗೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಜೂನ್ 12, 2022 (www.justkannada.in): ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಮಳೆ ಮುಂದುವರೆಯಲಿದೆ .

ನೈಋತ್ಯ ಮುಂಗಾರು ಪ್ರಭಾವದಿಂದ ಇನ್ನೂ ತುಂತುರು ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ ಮೊದಲ ವಾರದಲ್ಲಿಯೇ ನೈಋತ್ಯ ಮುಂಗಾರು ಕರ್ನಾಟಕಕ್ಕೆ ಆಗಮಿಸಿದೆ. ಆದರೆ 10 ದಿನಗಳಿಂದ ಮುಂಗಾರು ದುರ್ಗಲವಾಗಿದ್ದು, ಮಳೆಯಾಗುತ್ತಿಲ್ಲ.

ಇದೀಗ ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಜೂನ್ 14ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸೇರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.