Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಮನಾಥ್ ಕೋವಿಂದ್ ಅವರಿಗೆ ರಾಜ್ಯಪಾಲರು ಮತ್ತು ಸಿಎಂರಿಂದ ಸ್ವಾಗತ.

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಮನಾಥ್ ಕೋವಿಂದ್ ಅವರಿಗೆ ರಾಜ್ಯಪಾಲರು ಮತ್ತು ಸಿಎಂರಿಂದ ಸ್ವಾಗತ.

ಬೆಂಗಳೂರು, ಜೂನ್ 13, 2022(www.justkannada.in): ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಇಂದು ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಬೆಂಗಳೂರಿನಲ್ಲಿ ಇಂದು ಮತ್ತು  ನಾಳೆ ಆಯೋಜಿಸಲಾಗಿರುವ ರಾಷ್ಟ್ರೀಯ ಮಿಲಟರಿ ಶಾಲೆಯ ಪ್ಲಾಟಿನಂ ಜ್ಯುಬಿಲಿ ಸಮಾರಂಭ ಹಾಗೂ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ  ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ ( ಇಸ್ಕಾನ್‌ ) ನೂತನವಾಗಿ ನಿರ್ಮಿಸಿರುವ ರಾಜಾಧಿರಾಜ ‍ಶ್ರೀ ಗೋವಿಂದ ದೇವಾಲಯವನ್ನು ಲೋಕಾರ್ಪಣೆ  ಕಾರ್ಯಕ್ರಮದಲ್ಲಿ ಭಾಗವಹಿಲಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ  ರಾಮನಾಥ್ ಕೋವಿಂದ್ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಇದೇ ಸಮಯದಲ್ಲಿ ರಾಷ್ಟ್ರಪತಿಗಳೊಂದಿಗೆ ಆಗಮಿಸಿದ ಭಾರತದ ಮಹಿಳಾ ಪ್ರಥಮ ಪ್ರಜೆ ಸವಿತಾ ಕೋವಿಂದ್ ಅವರನ್ನೂ ಸಹ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ  ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ,  ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಕಾರ್ಯದರ್ಶಿ ಶ್ರೀಮತಿ ಹೇಮಲತಾ,  ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಹಾಗೂ ಇತರ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: President-Ramanath Kovind – arrival – Bangalore – welcome-Governor -CM.