Monday, October 5, 2026

BDA Apartments

ಅಂಧ ಗಾಯಕಿಯರಿಗೆ ಮನೆ ನಿರ್ಮಿಸಿಕೊಟ್ಟ ನಟ ಜಗ್ಗೇಶ್ BDA JK_Adv BDA Adv
Home Front Page ಐರ್ಲೆಂಡ್ ವಿರುದ್ಧದ ಟಿ-20 ಸರಣಿ: ಹಾರ್ದಿಕ್ ಪಾಂಡ್ಯ ನಾಯಕ

ಐರ್ಲೆಂಡ್ ವಿರುದ್ಧದ ಟಿ-20 ಸರಣಿ: ಹಾರ್ದಿಕ್ ಪಾಂಡ್ಯ ನಾಯಕ

ಬೆಂಗಳೂರು, ಜೂನ್ 16, 2022 (www.justkannada.in): ಐರ್ಲೆಂಡ್ ವಿರುದ್ಧದ ಟಿ-20 ಸರಣಿಗೆ ಭಾರತ ತಂಡಕ್ಕೆ ಹಾರ್ದಿಕ್ ಪಾಂಡ್ಯ ನಾಯಕರಾಗಲಿದ್ದಾರೆ.

ತಂಡದಲ್ಲಿ ಯುವ ಆಟಗಾರರಿಗೆ ಹೆಚ್ಚು ಮಣೆ ಹಾಕಲಾಗಿದ್ದು, ಮಧ್ಯಮ ವೇಗಿ ಭುವನೇಶ್ವರ್ ಕುಮಾರ್ ಗೆ ಉಪನಾಯಕ ಪಟ್ಟ ನೀಡಲಾಗಿದೆ.

ರಾಹುಲ್ ತ್ರಿಪಾಠಿಗೆ ಮೊದಲ ಬಾರಿ ತಂಡದ ಬಾಗಿಲು ತೆರೆದಿದೆ. ರೋಹಿತ್ ಶರ್ಮ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಜಸ್ ಪ್ರೀತ್ ಬುಮ್ರಾ ಸೇರಿದಂತೆ ಹಲವಾರು ಹಿರಿಯ ಆಟಗಾರರಿಗೆ ಅಲ್ಲದೇ ಮುಂಬರುವ ಇಂಗ್ಲೆಂಡ್ ಸರಣಿ ಹಿನ್ನೆಲೆಯಲ್ಲಿ ವಿಶ್ರಾಂತಿ ನೀಡಲಾಗಿದೆ.

ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿ.ಕೀ.), ಯಜುರ್ವೆಂದ್ರ ಚಾಹಲ್, ಅಕ್ಸರ್ ಪಟೇಲ್, ಆರ್.ಬಿಶ್ನೋಯಿ, ಹರ್ಷಲ್ ಪಟೇಲ್, ಆವಿಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.