Tuesday, October 13, 2026

Dasara Wishes

Happy Dasara
Home Front Page ನಾಳೆ ಪ್ರಧಾನಿ ಮೋದಿ ಕಾರ್ಯಕ್ರಮ: ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ ಪ್ರಧಾನಿ ಮೋದಿ ಕಾರ್ಯಕ್ರಮ: ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು, ಜೂನ್ 19, 2022 (www.justkannada.in): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ 20ರ ಸೋಮವಾರದಂದು ನಗರಕ್ಕೆ ಆಗಮಿಸುತ್ತಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದರಿಂದ, ಅವರು ಸಂಚರಿಸಲಿರುವ ಮಾರ್ಗದಲ್ಲಿ ಬರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂದು ಬಿಗಿಭದ್ರತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಸರಕಾರ ಆದೇಶ ಹೊರಡಿಸಿದೆ. ಇದರಂತೆ, ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು  ಅವರು ತಿಳಿಸಿದ್ದಾರೆ.