Friday, September 18, 2026

BDA Apartments

ಯೋಗ ದಿನ: ಮೈಸೂರು ಅರಮನೆ ಆವರಣದಲ್ಲಿ ಅಂತಿಮ ತಾಲೀಮು BDA JK_Adv BDA Adv
Home Front Page ಯೋಗ ದಿನ: ಮೈಸೂರು ಅರಮನೆ ಆವರಣದಲ್ಲಿ ಅಂತಿಮ ತಾಲೀಮು

ಯೋಗ ದಿನ: ಮೈಸೂರು ಅರಮನೆ ಆವರಣದಲ್ಲಿ ಅಂತಿಮ ತಾಲೀಮು

ಮೈಸೂರು, ಜೂನ್ 19, 2022 (www.justkannada.in): ನರೇಂದ್ರ ಮೋದಿ ಭಾಗವಹಿಸಲಿರುವ ಯೋಗ ಕಾರ್ಯಕ್ರಮದ ಅಂತಿಮ ಹಂತದ ತಾಲೀಮು ಮೈಸೂರಿನಲ್ಲಿ ಭಾನುವಾರ ನಡೆಯಿತು.

ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ತಾಲೀಮು ವೀಕ್ಷಿಸಿದರು. ಅರಮನೆ ಆವರಣದಲ್ಲಿ ಬೆಳಗ್ಗೆ 6.30ಕ್ಕೆ 10 ಸಾವಿರಕ್ಕೂ ಅಧಿಕ ಯೋಗಪಟುಗಳು ಪಾಲ್ಗೊಂಡಿದ್ದರು.

ಯೋಗ ಕಾರ್ಯಕ್ರಮದ ಅಂಗವಾಗಿ ವೇದಿಕೆ ಸಿದ್ಧತೆ, ಯೋಗಪಟುಗಳಿಗೆ ಸ್ಥಳಾವಕಾಶ, ಕುಡಿಯುವ ನೀರಿನ ವ್ಯವಸ್ಥೆ, ಎಲ್ಲೆಲ್ಲಿ ಪ್ರವೇಶ ಕಲ್ಪಿಸಲಾಗಿದೆ ಎಂಬುದನ್ನು ಸಚಿವರು ವೀಕ್ಷಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಅರಮನೆ ಆವರಣಕ್ಕೆ ಭೇಟಿ ನೀಡಿ ಭದ್ರತಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವೀಕ್ಷಣೆ ನಡೆಸಿದರು. ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದರು.