Saturday, September 12, 2026

BDA Apartments

Home Front Page ಯುವ ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ: ನಲಪಾಡ್ ಸೇರಿ ‘ಕೈ’ ಕಾರ್ಯಕರ್ತರು ಪೊಲೀಸರ ವಶಕ್ಕೆ.

ಯುವ ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ: ನಲಪಾಡ್ ಸೇರಿ ‘ಕೈ’ ಕಾರ್ಯಕರ್ತರು ಪೊಲೀಸರ ವಶಕ್ಕೆ.

ಬೆಂಗಳೂರು,ಜೂನ್,24,2022(www.justkannada.in): ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಮುಂದುವರೆದಿದ್ದು ಇಂದು ಬೆಂಗಳೂರಿನಲ್ಲಿ ರಾಜಭವನ ಚಲೋಗೆ ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

ಯುವಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಕಾಂಗ್ರೆಸ್ ಭವನದಿಂದ ರಾಜಭವನದವರೆಗೆ  ಬೃಹತ್ ಪ್ರತಿಭಟನೆ ನಡೆಯಿತು. ಸುಮಾರು 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ನಡುವೆ ರಾಜಭವನ  ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಅಧ್ಯಕ್ಷ  ನಲಪಾಡ್ ಸೇರಿ ಪ್ರತಿಭಟನಾಕಾರರನ್ನ  ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು.

Key words: Rajabhavan Chalo – Young Congress- against-agnipath