Wednesday, October 28, 2026

Dasara Wishes

Happy Dasara
Home Front Page ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಯತೀಂದ್ರ ಸಿದ್ದರಾಮಯ್ಯ.

ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಯತೀಂದ್ರ ಸಿದ್ದರಾಮಯ್ಯ.

ಮೈಸೂರು,ಜೂನ್,30,2022(www.justkannada.in): ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾನವೀಯತೆ ಮೆರೆದಿದ್ದಾರೆ.

ಶಾಸಕ ಯತೀಂದ್ರ ಸಿದ್ಧರಾಮಯ್ಯ ಇಂದು ಕ್ಷೇತ್ರ ಪ್ರವಾಸ ಕೈಗೊಂಡಿದ್ದರು. ಈ ವೇಳೆ ವರುಣ ಕ್ಷೇತ್ರದ ಮರಳೂರು ಗ್ರಾಮದ ಬಳಿ ರಸ್ತೆಯಲ್ಲಿ ಆಯತಪ್ಪಿ ಬೈಕ್ ನಿಂದ ಕೆಳಗೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡಿದ್ದರು. ಈ ಸಮಯದಲ್ಲಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ಕಾರು ನಿಲ್ಲಿಸಿ ಮಹಿಳೆಗೆ ಧೈರ್ಯ ತುಂಬಿ ಆಸ್ಪತ್ರೆಗೆ ಕಳುಹಿಸಿದರು.

ಈ ವೇಳೆ ಗಾಯಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಶಾಸಕ ಯತಿಂದ್ರ ಸಿದ್ಧರಾಮಯ್ಯ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಯಿತು.

Key words: Humanity- MLA- Yatindra Siddaramaiah – hospital – injured- woman