Friday, July 31, 2026

BDA Apartments

Home Front Page ಆರೋಗ್ಯ ಇಲಾಖೆ ಗುತ್ತಿಗೆ ಸಿಬ್ಬಂದಿಯ ನ್ಯಾಯಸಮ್ಮತ ಬೇಡಿಕೆ ಈಡೇರಿಸಲು ಸರ್ಕಾರ ಸಿದ್ಧ- ಸಚಿವ ಸುಧಾಕರ್.

ಆರೋಗ್ಯ ಇಲಾಖೆ ಗುತ್ತಿಗೆ ಸಿಬ್ಬಂದಿಯ ನ್ಯಾಯಸಮ್ಮತ ಬೇಡಿಕೆ ಈಡೇರಿಸಲು ಸರ್ಕಾರ ಸಿದ್ಧ- ಸಚಿವ ಸುಧಾಕರ್.

ಬೆಂಗಳೂರು,ಜುಲೈ,7,2022(www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.

ಆರೋಗ್ಯ ಇಲಾಖೆ ಗುತ್ತಿಗೆ ಸಿಬ್ಬಂದಿ ಮುಷ್ಕರ ವಿಚಾರ  ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ನ್ಯಾಯಸಮ್ಮತ ಬೇಡಿಕೆ ಈಡೇರಿಸಲು ಸರ್ಕಾರ ಸಿದ್ಧವಿದೆ ಎಂದಿದ್ದಾರೆ.

ಇನ್ನು ಪಿಎಸ್ ಐ ಹಗರಣ ಕುರಿತು ಕಾಂಗ್ರಸ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್,  ಹಗರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಯನ್ನೇ ಬಂಧಿಸಲಾಗಿದೆ. ಇಂತಹ ಕ್ರಮ ಹಿಂದಿನ ಸರ್ಕಾರದಲ್ಲಿ ನಡೆದಿದೆಯಾ..? ಕಾಂಗ್ರೆಸ್ ಗೆ ಆಪಾದನೆ ಮಾಡಲು ನೈತಿಕತೆ ಇಲ್ಲ . ಕಾಂಗ್ರೆಸ್ ನವರು ಸಿಎಂ ಗೃಹ ಸಚಿವರನ್ನ ಅಭಿನಂದಿಸಬೇಕು.  ಸಿಎಂ ಗೃಹ ಸಚಿವರು ಯಾರನ್ನು ರಕ್ಷಣೆ ಮಾಡುತ್ತಿಲ್ಲ.  ಬೇಕಾಬಿಟ್ಟಿ ಒಬ್ಬರ ಚಾರಿತ್ರ್ಯವಧೆ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

Key words: Government -ready – demand – health department- contract –staff-Minister -Sudhakar.