Saturday, September 19, 2026

BDA Apartments

Home Front Page ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ : ನದಿ ಪಾತ್ರದಲ್ಲಿ ಪ್ರವಾಹ ಮುನ್ನೆಚ್ಚರಿಕೆಗೆ ಸೂಚನೆ.

ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ : ನದಿ ಪಾತ್ರದಲ್ಲಿ ಪ್ರವಾಹ ಮುನ್ನೆಚ್ಚರಿಕೆಗೆ ಸೂಚನೆ.

ಮೈಸೂರು,ಜುಲೈ,7,2022(www.justkannada.in):  ಈ ಬಾರಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ, ಮಲೆನಾಡು ಭಾಗ ಸೇರಿದಂತೆ ಹಲವು ಕಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದಾಗಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.

ಈ ನಡುವೆ ಕಬಿನಿ ಜಲಾನಯನ ಪ್ರದೇಶದಲ್ಲಿ ಬಾರಿ ಮಳೆ ಹಿನ್ನಲೆ, ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ನದಿಗೆ ಬಿಡುವ  ಸಾಧ್ಯತೆ ಇದೆ. ಹೀಗಾಗಿ ನದಿ ಪಾತ್ರದಲ್ಲಿ ಪ್ರವಾಹ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ kabini

ಈ ಕುರಿತು ಕಬಿನಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆ ಹೊರಡಿಸಿದ್ದು, ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವವರು ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ. ನದಿಯ ಎರಡೂ ದಂಡೆಗಳಲ್ಲಿ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸುವಂತೆ ಆದೇಶ ಹೊರಡಿಸಿದ್ದಾರೆ.

Key words: Heavy- rains – Kabini -flood -prevention -river