Saturday, August 15, 2026

BDA Apartments

Home Cinema ರಾಜ್ಯಸಭೆಯಲ್ಲಿ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ ನಟ ಜಗ್ಗೇಶ್

ರಾಜ್ಯಸಭೆಯಲ್ಲಿ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ ನಟ ಜಗ್ಗೇಶ್

ಬೆಂಗಳೂರು, ಜುಲೈ 08, 2022 (www.justkannada.in): ಹಿರಿಯ ನಟ ಜಗ್ಗೇಶ್ ಅವರು ಇಂದು ರಾಜ್ಯಸಭೆಯಲ್ಲಿ ಕನ್ನಡದಲ್ಲಿಯೇ ಜಗ್ಗೇಶ್‌ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಜಗ್ಗೇಶ್ ಅವರು ಗುರು ರಾಘವೇಂದ್ರರ ಹೆಸರಿನಲ್ಲಿಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ಕುರಿತು ಜಗ್ಗೇಶ್‌ ಟ್ವೀಟ್ ಮಾಡಿದ್ದಾರೆ. ರಾಜ್ಯ ಸಭೆಯಲ್ಲಿ ಶ್ರದ್ಧೆಯಿಂದ ಪ್ರಮಾಣವಚನ ಸ್ವೀಕರಿಸಿದ್ದೇನೆ. ಸಿರಿಗನ್ನಡದಲ್ಲಿ ರಾಯರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಇದು ನನ್ನ ಬದುಕಿನ ಶ್ರೇಷ್ಠ ಕ್ಷಣ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್‌ ಕುಮಾರ್‌ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.