Tuesday, September 29, 2026

BDA Apartments

Home Front Page ಮಳೆ ಹಾನಿ ಪ್ರದೇಶಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ: ತಕ್ಷಣ ಪರಿಹಾರ ಕಲ್ಪಿಸುವಂತೆ ಸೂಚನೆ.

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ: ತಕ್ಷಣ ಪರಿಹಾರ ಕಲ್ಪಿಸುವಂತೆ ಸೂಚನೆ.

ಮೈಸೂರು, ಜುಲೈ,12,2022(www.justkannada.in): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು  ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಿರಿಯಾಪಟ್ಟಣ ತಾಲೂಕಿನ ವಿವಿಧೆಡೆ ಉರುಳಿ ಬಿದ್ದಿರುವ ಮನೆಗಳಿಗೆ ತೆರಳಿದ ಸಚಿವ ಎಸ್.ಟಿ ಸೋಮಶೇಖರ್, ಹಾನಿಗೀಡಾದ ಮನೆಗಳಿಗೆ ತಕ್ಷಣ ಪರಿಹಾರ ಹಣ ಬಿಡುಗಡೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿ ಪ್ರಮಾಣ, ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದುಕೊಂಡರು. ಮಳೆಯಿಂದ ಹಾನಿಗೊಳಗಾದ ಮನೆಯ ಮಾಲೀಕರು ಸಚಿವರ ಬಳಿ ತಮ್ಮ ಅಳಲು ತೋಡಿಕೊಂಡಿರು. ಅವರಿಗೆ ಸಾಂತ್ವನ ಹೇಳಿದ ಸಚಿವ ಎಸ್.ಟಿ ಸೋಮಶೇಖರ್ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಅಗತ್ಯ ನೆರವು ಒದಗಿಸುವುದಾಗಿ ತಿಳಿಸಿದರು.ಮಳೆ ಹಾನಿ ಪ್ರದೇಶಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ sts

ನಂತರ ಹೆಚ್.ಡಿ.ಕೋಟೆ ತಾಲೂಕಿಗೆ ತೆರಳಿದ ಸಚಿವರು, ಬೀಚನಹಳ್ಳಿಯ ಕಬಿನಿ ಅಣೆಕಟ್ಟೆಯ ಬಲದಂಡೆ ಪ್ರದೇಶದ ಕೆಳಭಾಗದಲ್ಲಿ ಮುಳುಗಡೆಯಾಗಿರುವ ಸೇತುವೆಯನ್ನು ವೀಕ್ಷಣೆ ಮಾಡಿದರು.

Key words: Minister-ST Somashekhar-visits-rain-damaged -areas.