Tuesday, September 29, 2026

BDA Apartments

Home Front Page ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡಿ, ಅಗತ್ಯ ಆಹಾರ ವಸ್ತುಗಳನ್ನ ತಲುಪಿಸಿ- ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ.

ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡಿ, ಅಗತ್ಯ ಆಹಾರ ವಸ್ತುಗಳನ್ನ ತಲುಪಿಸಿ- ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ.

 ಉಡುಪಿ,ಜುಲೈ,13,2022(www.justkannada.in): ಮಳೆಹಾನಿ ಸಂತ್ರಸ್ತರಿಗೆ ತಕ್ಷಣವೇ ಪರಿಹಾರ ವಿತರಿಸಿ, ಅವರಿಗೆ ಅಗತ್ಯ ಆಹಾರ ವಸ್ತುಗಳನ್ನ ತಲುಪಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಅದರಲ್ಲೂ ಕೊಡಗು, ಉಡುಪಿ, ಕಾರವಾರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಪಾರ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆಯಿಂದ ಸಿಎಂ ಬಸವರಾಜ ಬೊಮ್ಮಾಯಿ ಈ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ನೆರೆಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡಿ cm bommai cm bommai 1

ಈ ಮಧ್ಯೆ ಇಂದು ಉಡುಪಿಯಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ,  ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡಬೇಕು.   ಡಿಸಿ ಖಾತೆಯಲ್ಲಿರುವ, ಎನ್ ಡಿಆರ್ ಎಫ್ ಖಾತೆಯಲ್ಲಿರುವ ಹಣ ಬಳಸಿಕೊಳ್ಳಿ. ಅಗತ್ಯ ಆಹಾರ ವಸ್ತುಗಳನ್ನ ಸಂತ್ರಸ್ತರಿಗೆ ತಲುಪಿಸಿ ಸೇತುತೆ ರಸ್ತೆಗಳನ್ನ ದುರಸ್ಥಿ ತಕ್ಷಣ ಆಗಬೇಕು ಎಂದು  ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Key words: Provide –immediate-relief – victims-CM-Bommai