Tuesday, September 29, 2026

BDA Apartments

ಮತ್ತೆ ಸಿಎಂ ಆಗುವ ಆಸೆ ಬಿಚ್ಚಿಟ್ಟ ವಿಪಕ್ಷ ನಾಯಕ ಸಿದ‍್ಧರಾಮಯ್ಯ BDA JK_Adv BDA Adv
Home Front Page ಮತ್ತೆ ಸಿಎಂ ಆಗುವ ಆಸೆ ಬಿಚ್ಚಿಟ್ಟ ವಿಪಕ್ಷ ನಾಯಕ ಸಿದ‍್ಧರಾಮಯ್ಯ.

ಮತ್ತೆ ಸಿಎಂ ಆಗುವ ಆಸೆ ಬಿಚ್ಚಿಟ್ಟ ವಿಪಕ್ಷ ನಾಯಕ ಸಿದ‍್ಧರಾಮಯ್ಯ.

ಬೆಂಗಳೂರು,ಜುಲೈ,16,2022(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು ಪಕ್ಷಗಳು ಈಗಿನಿಂದಲೇ ಸಿದ‍್ಧತೆ ಶುರು ಮಾಡಿವೆ. ಈ ಮಧ್ಯೆ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತೆ ಸಿಎಂ ಆಗುವ ಆಸೆಯನ್ನ ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ನಿನ್ನೆ ಬಾಗಲಕೋಟೆಯಲ್ಲಿ ನೇಕಾರರ ಮನವಿ ಸಲ್ಲಿಸಿದ ವೇಳೆ  ಮಾತನಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ಇನ್ನೊಮ್ಮೆ ಅಧಿಕಾರಕ್ಕೆ ಬಂದ್ರೆ ನೇಕಾರರ ವಿದ್ಯುತ್ ಬಿಲ್ ಮನ್ನಾ ಮಾಡುತ್ತೇನೆ. ಅಧಿಕಾರಕ್ಕೆ ಬಂದರೇ ನಿಮ್ಮ ಸಾಲ ಜೀರೋ ಮಾಡುತ್ತೇವೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೇಕಾರರ ಸಾಲಮನ್ನಾ ಘೋಷಿಸುತ್ತೇವೆ ಎಂದು ಹೇಳಿದ್ದಾರೆ.

ಈ ಮೂಲಕ ಸಿಎಂ ಆಗುವ ಆಸೆಯನ್ನ ಪರೋಕ್ಷವಾಗಿ ಸಿದ್ಧರಾಮಯ್ಯ  ವ್ಯಕ್ತಪಡಿಸಿದ್ದಾರೆ. ಸಿದ್ಧರಾಮಯ್ಯ ಹೋದಾಗಲೆಲ್ಲಾ ಬೆಂಬಲಿಗರು ಅಭಿಮಾನಿಗಳು ಸಿದ್ಧರಾಮಯ್ಯ ಮತ್ತೊಮ್ಮೆ ಸಿಎಂ  ಆಗಲಿ ಎಂದು ಘೋಷಣೆ ಕೂಗಿದ ಘಟನೆಗಳನ್ನ ಸ್ಮರಿಸಬಹುದು.

Key words: Opposition leader- Siddramaiah -expressed – become -CM -again.