Monday, October 5, 2026

BDA Apartments

ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಎಸ್.ಎಂ ಕೃಷ್ಣ: ಅವರ ಆಡಳಿತ ವೈಖರಿ ರ...
Home Front Page ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಜುಲೈ 17, 2022 (www.justkannada.in): ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮತ್ತೆ ವರುಣಾರ್ಭಟ ಜೋರಾಗಿದ್ದು, ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚುತ್ತಿವೆ.

ಉತ್ತರ ಕರ್ನಾಟಕ ಭಾಗದಲ್ಲಿ ನದಿಗಳು ಅಪಯಾದಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಭೀತಿ ಉಂಟಾಗಿದೆ. ಒಟ್ಟಾರೆ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಜುಲೈ 20ರವರೆಗೂ ಕರ್ನಾಟಕ, ಗೋವಾ, ಮಹಾರಾಷ್ಟ್ರ, ಛತ್ತೀಸ್ ಗಢ, ಆಂಧ್ರಪ್ರದೇಶ, ಗುಜರಾತ್, ಕೇರಳ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರೆಯಲಿದೆ.