Monday, October 5, 2026

BDA Apartments

ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಎಸ್.ಎಂ ಕೃಷ್ಣ: ಅವರ ಆಡಳಿತ ವೈಖರಿ ರ...
Home Front Page ನಾಳೆ ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಆಯ್ಕೆ ಬಹುತೇಕ ಖಚಿತ

ನಾಳೆ ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಆಯ್ಕೆ ಬಹುತೇಕ ಖಚಿತ

ಬೆಂಗಳೂರು, ಜುಲೈ 17, 2022 (www.justkannada.in): ನಾಳೆ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಸೋಮವಾರ ಮತದಾನ ಮಾಡಲಿದ್ದಾರೆ.

ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇಕಡಾ 60 ರಷ್ಟು ಮತಗಳನ್ನು ಪಡೆದು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸೋಲಿಸುವ ಸಾಧ್ಯತೆ ಹೆಚ್ಚಾಗಿದೆ.

ಸಂಸತ್ ಭವನ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮತದಾನ ನಡೆಯಲಿದ್ದು, ಬ್ಯಾಲೆಟ್ ಬಾಕ್ಸ್ ಗಳು ಈಗಾಗಲೇ ಅಲ್ಲಿಗೆ ತಲುಪಿವೆ.

ಜುಲೈ 21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆಯಲಿದ್ದು, ಜುಲೈ 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಾತಿನಿಧ್ಯ ವ್ಯವಸ್ಥೆಯ ಮೂಲಕ ರಾಷ್ಟ್ರಪತಿ ಆಯ್ಕೆ ನಡೆಯಲಿದ್ದು, ಚುನಾಯಿತ ಸಂಸದರು ಮತ್ತು ರಾಜ್ಯ ಶಾಸಕಾಂಗ ಸಭೆಗಳ ಸದಸ್ಯರು ಮತದಾನ ಮಾಡಲು ಅರ್ಹರಾಗಿದ್ದಾರೆ.