Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Cinema ನಿರ್ದೇಶಕ ಮಣಿರತ್ನಂಗೆ ಕೊರೊನಾ ಸೋಂಕು: ಆಸ್ಪತ್ರೆಗೆ ದಾಖಲು

ನಿರ್ದೇಶಕ ಮಣಿರತ್ನಂಗೆ ಕೊರೊನಾ ಸೋಂಕು: ಆಸ್ಪತ್ರೆಗೆ ದಾಖಲು

ಬೆಂಗಳೂರು, ಜುಲೈ 19, 2022 (www.justkannada.in): ನಿರ್ದೇಶಕ ಮಣಿರತ್ನಂ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಜುಲೈ 8 ರಂದು ನಡೆದಿದ್ದ ಪೊನ್ನಿಯನ್ ಸೆಲ್ವನ್ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಣಿರತ್ನಂ ಭಾಗಿಯಾಗಿದ್ದರು. ಇದೀಗ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊರೊನಾ ದೃಢಪಟ್ಟಿರುವುದರಿಂದ ಚಿಕಿತ್ಸೆಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಬಂದಿಲ್ಲ.

ಅಂದಹಾಗೆ ನಿನ್ನೆಯಷ್ಟೇ ಮಣಿರತ್ನಂ ಮತ್ತು ನಟ ವಿಕ್ರಂಗೆ ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿ ಚೋಳರ ಬಗ್ಗೆ ವಿವಾದಾತ್ಮಕ ಅಂಶವಿದೆ ಎಂಬ ಕಾರಣಕ್ಕೆ ಕೋರ್ಟ್ ನೋಟಿಸ್ ಬಂದಿತ್ತು.