Sunday, August 2, 2026

BDA Apartments

Home Front Page ಮೈಸೂರು ಮಹಾನಗರ ಪಾಲಿಕೆ ಆಯುಕ್ತರ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ.

ಮೈಸೂರು ಮಹಾನಗರ ಪಾಲಿಕೆ ಆಯುಕ್ತರ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ.

ಮೈಸೂರು,ಜುಲೈ,26,2022(www.justkannada.in):   ವಾರ್ಡ್ ನಲ್ಲಿ ನೀರಿನ ಸಮಸ್ಯೆ ಎದುರಾದರೂ ಇತ್ತ ಗಮನಹರಿಸದೇ ನಿರ್ಲಕ್ಷ್ಯ ತೋರುತ್ತಿರುವ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ ಅವರನ್ನ ಕೂಡಲೇ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ 50ನೇ ವಾರ್ಡ್ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.

ನಗರ ಪಾಲಿಕೆ ಸದಸ್ಯರಾದ ಲೋಕೇಶ್ ಪಿಯಾ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಸ್ಥಳೀಯ ನಿವಾಸಿಗಳು, ವಾರ್ಡ್‌ ನಂ. 50ರಲ್ಲಿ  ಒಂದು ತಿಂಗಳಿಂದ ನೀರಿನ ಸಮಸ್ಯೆ ಇದೆ. ಆದರೆ ಇತ್ತ ಗಮನ ಹರಿಸದೆ ಮೈಸೂರು ಮಹಾ ನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ  ನಿರ್ಲಕ್ಷ್ಯ ತೋರುತ್ತಿದ್ದಾರೆ. ಲಕ್ಷ್ಮೀಕಾಂತರೆಡ್ಡಿ ಅವರು ಅಧಿಕಾರ ವಹಿಸಿಕೊಂಡಾಗಿನಿಂದಲೂ ಮೈಸೂರಿನ ಎಲ್ಲಾ ವಾರ್ಡ್‌ ಗಳಲ್ಲೂ ಸಮಸ್ಯೆಗಳು ಹೆಚ್ಚಾಗಿವೆ.

ವಾರ್ಡ್ ನಂ 50 ರಲ್ಲಿ ಬೀದಿದೀಪದ ವ್ಯವಸ್ಥೆ ಸರಿಯಾಗಿ ಇಲ್ಲ. ನೀರಿನ ವ್ಯವಸ್ಥೆಯೂ ಇಲ್ಲ. ಹೀಗಾಗಿ ಆದಷ್ಟು ಬೇಗ ಇತ್ತ ಗಮನ ಹರಿಸಬೇಕು. ಇಲ್ಲವಾದಲ್ಲಿ ನಗರ ಪಾಲಿಕೆ ಆಯುಕ್ತರ ಕಛೇರಿ ಮುಂದೆ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

Key words: Protest-demanding-transfer – Mysore-city- Corporation -commissioner.