Thursday, August 13, 2026

BDA Apartments

Home Front Page ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಮಳೆ : ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ : ಸಿಎಂ...

ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಮಳೆ : ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಆಗಸ್ಟ್ 2 ,2022(www.justkannada.in): ರಾಜ್ಯದ ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ  ಹಲವೆಡೆ ಹಾಗೂ ಕರಾವಳಿ ಭಾಗದಲ್ಲಿ ಪುನ: ಹೆಚ್ಚು ಮಳೆಯಾಗುತ್ತಿದೆ.  ಮಳೆ ಅನಾಹುತದಿಂದ ಸಾವು ನೋವುಗಳಾಗಿದ್ದು, ಈ ಬಗ್ಗೆ ಇಂದು ಸಭೆ ನಡೆಸಲಾಗುವುದು. ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿರುವ ಮಂಕಿಪಾಕ್ಸ್ ಸೋಂಕು ನಿಯಂತ್ರಣದ ಬಗ್ಗೆಯೂ ಸಭೆ ನಡೆಸಲಾಗುವುದು. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸಿಐಐಎ ನ ಕಲ್ಚರಲ್ ವಿಂಗ್ ನ ಸಭೆಗಾಗಿ ಆಗಸ್ಟ್ 4 ರಂದು ಬೆಂಗಳೂರಿಗೆ ಆಗಮಿಸುತ್ತಿರುವುದಾಗಿ ಸಿಎಂ ಬೊಮ್ಮಾಯಿ ತಿಳಿಸಿದರು.

Key words: Increasing- rain- along –coast- Action -relief – rescue –operations- CM Basavaraja Bommai