Wednesday, October 7, 2026

BDA Apartments

immense respect BDA JK_Adv BDA Adv
Home Front Page ದಾವಣಗೆರೆಯಲ್ಲಿ ಸಿದ್ಧರಾಮೋತ್ಸವಕ್ಕೆ ಸಜ್ಜು:  8 ಲಕ್ಷ ಮಂದಿ ಭಾಗಿ ನಿರೀಕ್ಷೆ.

ದಾವಣಗೆರೆಯಲ್ಲಿ ಸಿದ್ಧರಾಮೋತ್ಸವಕ್ಕೆ ಸಜ್ಜು:  8 ಲಕ್ಷ ಮಂದಿ ಭಾಗಿ ನಿರೀಕ್ಷೆ.

ದಾವಣಗೆರೆ,ಆಗಸ್ಟ್,3,2022(www.justkannada.in)  ವಿಪಕ್ಷ ನಾಯಕ, ಮಾಜಿ ಸಿಎಂ  ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ ಆಚರಣೆಗೆ ಬೆಣ್ಣೆನಗರಿ ದಾವಣಗೆರೆ ಸಜ್ಜಾಗಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಇಂದು ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ನಡೆಯಲಿರುವ ಸಿದ್ದರಾಮೋತ್ಸವಕ್ಕಾಗಿ ನಗರದ ಎಲ್ಲೆಡೆ ಕಾಂಗ್ರೆಸ್ ಧ್ವಜ, ಬ್ಯಾನರ್, ಕಟೌಟ್​ಗಳು ರಾರಾಜಿಸುತ್ತಿವೆ. ಘಟಾನುಘಟಿ ನಾಯಕರು ಈಗಾಗಲೇ ದಾವಣಗೆರೆಗೆ ಬಂದಿದ್ದು, ರಾಜ್ಯದ ವಿವಿಧೆಡೆಯಿಂದ ಸುಮಾರು 8 ಲಕ್ಷ ಮಂದಿ ಭಾಗಿಯಾಗುವ ಸಾಧ್ಯತೆ ಇದೆ.ದಾವಣಗೆರೆಯಲ್ಲಿ ಸಿದ್ಧರಾಮೋತ್ಸವಕ್ಕೆ ಸಜ್ಜು: 8 ಲಕ್ಷ ಮಂದಿ ಭಾಗಿ ನಿರೀಕ್ಷೆ si...

ಮಧ್ಯಾಹ್ನ 12ಕ್ಕೆ ಅಮೃತ ಮಹೋತ್ಸವ ಕಾರ್ಯಕ್ರಮ ಶುರುವಾಗಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕೆಲವೇ ಕೆಲವು ಗಣ್ಯರು ಮಾತನಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಮುಕ್ತಾಯಗೊಳಿಸಲು ಆಯೋಜಕರು ಚಿಂತನೆ ನಡೆಸಿದ್ದಾರೆ.  ಇನ್ನು ದಾವಣಗೆರೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

Key words: davanagere-siddaramotsava-congress- siddaramaiah