Sunday, September 20, 2026

BDA Apartments

ಕೆಆರ್ ಎಸ್ ಡ್ಯಾಂನಿಂದ ಹೊರ ಹರಿವು ಹೆಚ್ಚಳ: ಶ್ರೀರಂಗಪಟ್ಟಣ ವ್ಯಾಪ್ತಿಯ ದೇವಸ...
Home Front Page ಕೆಆರ್ ಎಸ್ ಡ್ಯಾಂನಿಂದ ಹೊರ ಹರಿವು ಹೆಚ್ಚಳ: ಶ್ರೀರಂಗಪಟ್ಟಣ ವ್ಯಾಪ್ತಿಯ ದೇವಸ್ಥಾನಗಳು ಜಲಾವೃತ.

ಕೆಆರ್ ಎಸ್ ಡ್ಯಾಂನಿಂದ ಹೊರ ಹರಿವು ಹೆಚ್ಚಳ: ಶ್ರೀರಂಗಪಟ್ಟಣ ವ್ಯಾಪ್ತಿಯ ದೇವಸ್ಥಾನಗಳು ಜಲಾವೃತ.

ಮಂಡ್ಯ,ಆಗಸ್ಟ್,4,2022(www.justkannada.in):  ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಮುಂದುವರೆದಿದ್ದು ನಿರಂತರವಾಗಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಈ ಮಧ್ಯೆ ಕೊಡಗು, ಮೈಸೂರು ಭಾಗದಲ್ಲಿ ವ್ಯಾಪಕ ವರ್ಷಧಾರೆಯಿಂದಾಗಿ ಕೆಆರ್ ಎಸ್ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ.

ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಡ್ಯಾಂನಿಂದ ಹೊರಹರಿವು ಹೆಚ್ಚಾಗಿದ್ದು, ಕಾವೆರಿ ದಡದಲ್ಲಿರುವ ದೇವಸ್ಥಾನಗಳು ಮುಳುಗಡೆಯಾಗಿವೆ.  ಶ್ರೀರಂಗಪಟ್ಟಣ ವ್ಯಾಪ್ತಿಯ ಚಂದ್ರಮೌಳೇಶ್ವರ .ಅಷ್ಟಮಾತೆಯರ ದೇಗುಲ ಜಲಾವೃತವಾಗಿದೆ.ಕೆಆರ್ ಎಸ್ ಡ್ಯಾಂನಿಂದ ಹೊರ ಹರಿವು ಹೆಚ್ಚಳ chandramouleshwara

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಜೋರಾಗುತ್ತಿದೆ. ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬರುತ್ತಿದೆ.

Key words: Increase – outflow -KRS Dam-Temples -around -Srirangapatna