Sunday, September 27, 2026

BDA Apartments

ದೇಶದಲ್ಲಿ 20,551 ಮಂದಿಗೆ ಕೋವಿಡ್ ಸೋಂಕು ದೃಢ BDA JK_Adv BDA Adv
Home Front Page ದೇಶದಲ್ಲಿ 20,551 ಮಂದಿಗೆ ಕೋವಿಡ್ ಸೋಂಕು ದೃಢ

ದೇಶದಲ್ಲಿ 20,551 ಮಂದಿಗೆ ಕೋವಿಡ್ ಸೋಂಕು ದೃಢ

ಬೆಂಗಳೂರು, ಆಗಸ್ಟ್ 05, 2022 (www.justkannada.in): ಕಳೆದ 24 ಗಂಟೆಯಲ್ಲಿ ದೇಶದಲ್ಲಿ 20,551 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,600 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,35,364 ಕೋವಿಡ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಶೇ.98.50ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,34,45,624 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 36,95,835 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,05,59,47,243 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,00,110 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.