Saturday, August 15, 2026

BDA Apartments

Home Front Page ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಸಿಎಂ ಬದಲಾಯಿಸಿದ ಘನ ಉದಹಾರಣೆ ನಿಮ್ಮ ಪಕ್ಷಕ್ಕೆ...

ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಸಿಎಂ ಬದಲಾಯಿಸಿದ ಘನ ಉದಹಾರಣೆ ನಿಮ್ಮ ಪಕ್ಷಕ್ಕೆ ಮಾತ್ರ- ಸಚಿವ ಸುಧಾಕರ್ ಟಾಂಗ್.

ಬೆಂಗಳೂರು,ಆಗಸ್ಟ್,9,2022(www.justkannada.in):  ಅಮಿತ್ ಶಾ ಬಂದುಹೋದ ಬಳಿಕ ಮೋಡ ಕವಿದ ವಾತಾವರಣ. 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವುದು ಸನ್ನಿಹಿತವಾಗಿದೆ ಎಂದು ಟ್ವಿಟ್ ಮಾಡಿ ಟೀಕಿಸಿದ್ಧ ರಾಜ್ಯ ಕಾಂಗ್ರೆಸ್ ಘಟಕಕ್ಕೆ ಟ್ವಿಟ್ಟರ್ ನಲ್ಲೇ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟಾಂಗ್ ನೀಡಿದ್ದಾರೆ.

ಗಾಜಿನ ಮನೆಯಲ್ಲಿ ನಿಂತು ಅನ್ಯರತ್ತ ಕಲ್ಲು ತೂರುತ್ತಿರುವ ಕಾಂಗ್ರೆಸಿಗರ ಮನಃಸ್ಥಿತಿಯ ಬಗ್ಗೆ ಅಯ್ಯೋ ಎನ್ನಿಸುತ್ತಿದೆ. ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಬದಲಾಯಿಸಿದ ಘನ ಉದಾಹರಣೆ ನಿಮ್ಮ ಪಕ್ಷಕ್ಕೆ ಮಾತ್ರ ಇದೆ ಎಂದು ರಾಜ್ಯ ಕಾಂಗ್ರೆಸ್ ಗೆ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.

ಹಾಗೆಯೇ ಟ್ವಿಟ್ಟರ್ ನಲ್ಲಿ ವಾಗ್ದಾಳಿ ಮುಂದುವರೆಸಿದ ಸಚಿವ ಸುಧಾಕರ್, ಮುಖ್ಯಮಂತ್ರಿ ಸ್ಥಾನದ ಘನತೆ- ಗೌರವಗಳನ್ನು ಹಾಳುಗೆಡವಿದ್ದೇ ಕಾಂಗ್ರೆಸ್. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮನೆಯ ಗೇಟ್ ಕೀಪರ್ ಗಳ ರೀತಿ ಕಾಂಗ್ರೆಸ್ ಮುಖ್ಯಮಂತ್ರಿಗಳು ವರ್ತಿಸಿದ್ದು ಇತಿಹಾಸ. ಆದರೆ ಮುಖ್ಯಮಂತ್ರಿ ಗಾದಿಯ ಕನಸು ಕಾಣುತ್ತಿರುವ ರಾಜ್ಯದ ಇಬ್ಬರು ಹಿರಿಯ ನಾಯಕರು ಈಗಲೇ ಗಾಂಧಿ ಕುಟುಂಬದ ಗೇಟ್ ಕಾಯುತ್ತಿರುವುದು ವರ್ತಮಾನ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ಧರಾಮಯ್ಯ ಅವರ ಕಾಲೆಳೆದಿದ್ದಾರೆ.

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಎಂಬುದು ಕಾಂಗ್ರೆಸ್ ಕಾಣುತ್ತಿರುವ ಕನಸು. ಬೊಮ್ಮಾಯಿ ಅವರ ದಕ್ಷ ನಾಯಕತ್ವದಲ್ಲಿ ಬಿಜೆಪಿ ಸರಕಾರ ಸುಭದ್ರವಾಗಿದೆ. ಆದರೆ ಕಾಂಗ್ರೆಸ್ ನ ಡಬಲ್ ಡೋರ್ ಬಸ್ಸಿನಿಂದ ಯಾರು, ಯಾರನ್ನು ಕೆಳಗಿಳಿಸುತ್ತಾರೆ ಎಂಬುದು ಸದ್ಯದಲ್ಲೇ ಗೊತ್ತಾಗುತ್ತದೆ ಎಂದು ಸುಧಾಕರ್  ಸಿಎಂ ಬದಲಾವಣೆ ವಿಚಾರ ತಳ್ಳಿ ಹಾಕಿದ್ದಾರೆ.

Key words:  CM -changing -based – owner -Delhi –congress-Minister- Sudhakar