Monday, September 21, 2026

BDA Apartments

ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ರೌಡಿಶೀಟರ್ ಮೇಲೆ ಫೈರಿಂಗ್ BDA JK_Adv BDA Adv
Home Crime ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ರೌಡಿಶೀಟರ್ ಮೇಲೆ ಫೈರಿಂಗ್

ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ರೌಡಿಶೀಟರ್ ಮೇಲೆ ಫೈರಿಂಗ್

ಮಂಗಳೂರು:ಮೇ-10:(www.justkannada.in) ಕುಖ್ಯಾತ ರೌಡಿಶೀಟರ್ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಯತ್ನಿಸಿದಾಗ ರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡುಹಾರಿಸಿ ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಟೊರಿಯಸ್ ರೌಡಿ ಗೌರೀಶ್ ಹಲ್ಲೆಗೆ ಮುಂದಾದಾತ. ಗೌರೀಶ್ ಜನರಿಂದ ಹಫ್ತಾ ವಸೂಲಿ ಮಾಡುತ್ತಿದ್ದ. ಈ ಬಗ್ಗೆ ದೂರು ಬಂದಿದ್ದ ಹಿನ್ನೆಲೆ ಪೊಲೀಸರು ಈತನನ್ನು ಬಂಧಿಸಲು ಮುಂದಾಗಿದ್ದರು. ಆಗ ಈತ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಇದರಿಂದ ಮುಖ್ಯ ಪೇದೆ ಶಾಂತಪ್ಪ ಎಂಬುವವರಿಗೆ ಗಾಯಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಈತನ ಕಾಲಿಗೆ ಫೈರಿಂಗ್ ಮಾಡಿ ಬಂಧಿಸಿದ್ದಾರೆ.

ಗೌರೀಶ್ ವಿರುದ್ಧ ಹಫ್ತಾ ವಸೂಲಿ ಮಾತ್ರವಲ್ಲ ಕೊಲೆ ಪ್ರಕರಣ ಕೂಡ ದಾಖಲಾಗಿದ್ದವು. ಮೂರು ಕೊಲೆ ಸೇರಿ ಆರು ಪ್ರಕರಣದಲ್ಲಿ ಗೌರೀಶ್​ ಭಾಗಿಯಾಗಿದ್ದ. ಈತನನ್ನು ಬಂಧಿಸಲು ಪೊಲೀಸರು ಹಲವು ದಿನಗಳಿಂದಲೇ ಸಿದ್ಧತೆ ನಡೆಸಿದ್ದರು ಎನ್ನಲಾಗಿದೆ.

ಗಾಯಗೊಂಡಿರುವ ಪೊಲೀಸ್ ಮತ್ತು ರೌಡಿ ಗೌರೀಶ್‍ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ರೌಡಿಶೀಟರ್ ಮೇಲೆ ಫೈರಿಂಗ್

Firing and arrest police one rowdysheater involved in three murders