Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಆಯ್ಕೆ ಪಟ್ಟಿ ಶೀಘ್ರ ಪ್ರಕಟ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಆಯ್ಕೆ ಪಟ್ಟಿ ಶೀಘ್ರ ಪ್ರಕಟ

ಬೆಂಗಳೂರು, ಆಗಸ್ಟ್ 14, 2022 (www.justkannada.in): ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿ ಆಯ್ಕೆ ಪಟ್ಟಿ ಶೀಘ್ರ ಪ್ರಕಟವಾಗಲಿದೆ.

1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿ ಮೂಲಕ ಭರ್ತಿಗೆ ಅರ್ಜಿ ಆಹ್ವಾನಿಸಿ, ಸ್ಪರ್ಧಾತ್ಮಕ ಪರೀಕ್ಷೆ ಕೂಡ ನಡೆಸಿತ್ತು. ಇದೀಗ ಶೀಘ್ರವೇ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳು ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ಥ ನಾರಾಯಣ ಹಾಗೂ ಕೆಇಎ ಯ ನಿರ್ದೇಶಕರಾದ ರಮ್ಯ ಅವರನ್ನು ಭೇಟಿಯಾಗಿ ಕೆಇಎ ಮೂಲಕ ಪಾರದರ್ಶಕವಾಗಿ ಪರೀಕ್ಷಾ ಪ್ರಕ್ರಿಯೆ ನಡೆಸಿರುವುದನ್ನು ಶ್ಲಾಘಿಸಿ, ಕೆಇಎ ಮತ್ತು ಉನ್ನತ ಶಿಕ್ಷಣ ಸಚಿವಾಲಯದ ಕಾರ್ಯವನ್ನು ಅಭಿನಂದಿಸಿದ್ದರು.

ಈ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಮತ್ತು ತಾತ್ಕಾಲಿಕ ಅಂಕ ಪಟ್ಟಿಯನ್ನು ಕೆಇಎ ಕಳೆದ ಜುಲೈ 8 ರಂದು ಬಿಡುಗಡೆ ಮಾಡಿತ್ತು. ಇದಾಗಿ ಒಂದು ತಿಂಗಳು ಕಳೆದರೂ ದಾಖಲೆ ಪರಿಶೀಲನೆಗಾಗಿ ಆಯ್ಕೆ ಪಟ್ಟಿ ಬಿಡುಗಡೆ ಮಾಡದೇ ಇರುವುದರಿಂದ ಆತಂಕದಲ್ಲಿದ್ದೇವೆ ಎಂಬುದಾಗಿ ಹುದ್ದೆ ಆಕಾಂಕ್ಷಿಗಳು ಅಳಲು ತೋಡಿಕೊಂಡಿದ್ದರು.