Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ರಾಕೇಶ್ ಜುಂಝನ್ವಾಲಾ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ರಾಕೇಶ್ ಜುಂಝನ್ವಾಲಾ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ಬೆಂಗಳೂರು, ಆಗಸ್ಟ್ 14, 2022 (www.justkannada.in): ಷೇರು ಮಾರುಕಟ್ಟೆ ದಿಗ್ಗಜ ರಾಕೇಶ್ ಜುಂಝನ್‌ವಾಲಾ ನಿಧನಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ರಾಕೇಶ್ ಅವರು​ ಮುಂಬೈನ ಬ್ರೀಚ್​​ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 6:30ಕ್ಕೆ ಕೊನೆಯುಸಿರೆಳೆದಿದ್ದಾರೆ.

ಹಲವಾರು ಗಣ್ಯರು ಟ್ವಿಟ್ಟರ್ ಸೇರಿದಂತೆ ಸೋಷಿಯಲ್ ಮೀಡಿಯಾದಲ್ಲಿ ರಾಕೇಶ್ ಜುಂಝನ್‌ವಾಲಾ ನಿಧನಕ್ಕೆಕಂಬನಿ ಮುಡಿದಿದ್ದಾರೆ.

ರಾಕೇಶ್ ಜುಂಝನ್‌ವಾಲಾ ಭಾರತದ ಪ್ರಗತಿಯ ಬಗ್ಗೆ ತುಂಬಾ ಉತ್ಸುಕರಾಗಿದ್ದರು. ಅವರ ಅಗಲಿಕೆ ಬೇಸರವನ್ನುಂಟು ಮಾಡಿದೆ. ಅವರ ಕುಟುಂಬಕ್ಕೆ ಮತ್ತು ಹಿತೈಷಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಕ್ಯಾಪಿಟಲ್​​ ಮೈಂಡ್​ನ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೀಪಕ್​ ಶೆಣೈ ಸೇರಿದಂತೆ ಹಲವಾರು ಗಣ್ಯರು ನುಡಿ ನಮನ ಸಲ್ಲಿಸಿದ್ದಾರೆ.