Saturday, August 15, 2026

BDA Apartments

Home Front Page ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲ: ಶಿವಮೊಗ್ಗ ಘಟನೆ ಕುರಿತು ರಣದೀಪ್ ಸಿಂಗ್ ಸುರ್ಜೇವಾಲ...

ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲ: ಶಿವಮೊಗ್ಗ ಘಟನೆ ಕುರಿತು ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ.

ಬೆಂಗಳೂರು,ಆಗಸ್ಟ್,16,2022(www.justkannada.in):  ಶಿವಮೊಗ್ಗದಲ್ಲಿ ನಿನ್ನೆ ನಡೆದ ಗಲಭೆ, ಯುವಕನ ಮೇಲೆ ಚಾಕು ಇರಿತ ಪ್ರಕರಣ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ರಾಜ್ಯ ಸರ್ಕಾರ ಹೇಗೆ ಆಡಳಿತ ನಡೆಸುತ್ತಿದೆ ಎಂದು ಶಿವಮೊಗ್ಗ ಘಟನೆಗಳನ್ನ ನೋಡಿದರೇ ಗೊತ್ತಾಗುತ್ತೆ. ರಾಜ್ಯದಲ್ಲಿ ಇಷ್ಟೆಲ್ಲಾ ಆದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಣದೀಪ್. ಈ ಸರ್ಕಾರ ಜನರನ್ನ ಬಲಿ ಪಡೆಯುತ್ತಿದೆ ಎಂದು ಕಿಡಿಕಾರಿದರು.

ಬೊಮ್ಮಾಯಿ ಅಸಮರ್ಥ ಸಿಎಂ. ಈ ಸರ್ಕಾರ 40%ನಲ್ಲಿ ನಡೆಯುತ್ತಿದೆ. ಶಿವಮೊಗ್ಗ, ಮಂಗಳೂರಿನಲ್ಲಿ ಘಟನೆಗಳಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

Key words: Bommai- government – complete- failure-Randeep Singh Surjewala