Tuesday, August 4, 2026

BDA Apartments

Home Front Page ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಲಾಂನಬಿ ಅಜಾದ್.

ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಲಾಂನಬಿ ಅಜಾದ್.

ನವದೆಹಲಿ,ಆಗಸ್ಟ್,17,2022(www.justkannada.in): ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು  ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ   ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜಮ್ಮುಕಾಶ್ಮೀರದ ರಾಜಕೀಯ ವ್ಯವಹಾರದ ಸಮಿತಿಗೂ ಗುಲಾಂನಬಿ ಅಜಾದ್  ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಯ  ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ನೇಮಕಾತಿ ಆದೇಶ ಹೊರಬಿದ್ದ ಕೆಲಹೊತ್ತಿನಲ್ಲಿಯೇ ಅವರು ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು.

ಆರೋಗ್ಯ ಕಾರಣಗಳಿಂದಾಗಿ ಜಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲು ಆಜಾದ್ ನಿರಾಕರಿಸಿದ್ದಾರೆ. ಈ ವಿಚಾರವನ್ನು ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Key words: Gulannabi Azad- resigned – post – President – Congress- Campaign -Committee.