Saturday, August 8, 2026

BDA Apartments

Home Cinema ಅಪ್ಪು ಸಮಾಧಿ ಅಭಿವೃದ್ಧಿ: ಸಿಎಂ ಭೇಟಿ ಮಾಡಿದ ಅಶ್ವಿನಿ, ರಾಘಣ್ಣ

ಅಪ್ಪು ಸಮಾಧಿ ಅಭಿವೃದ್ಧಿ: ಸಿಎಂ ಭೇಟಿ ಮಾಡಿದ ಅಶ್ವಿನಿ, ರಾಘಣ್ಣ

ಬೆಂಗಳೂರು, ಆಗಸ್ಟ್ 18, 2022 (www.justkannada.in): ರಾಜ್‌ ಕುಟುಂಬ ಸಿಎಂ ಅವರನ್ನು ಭೇಟಿ ಮಾಡಿದೆ. . ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ಯುವ ರಾಜಕುಮಾರ್ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಇದ್ದಕ್ಕಿದ್ದ ಹಾಗೆ ರಾಜ್‌ ಕುಟುಂಬದ ಸದಸ್ಯರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ರೇಸ್ ಕೋರ್ಸ್ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಡಾ. ರಾಜ್ ಕುಮಾರ್ ಕುಟುಂಬದ ಸದಸ್ಯರು ಭೇಟಿಯಾಗಿದೆ.

ಕಂಠೀರವ ಸ್ಟುಡಿಯೋ ಮತ್ತು ಅಲ್ಲಿನ ರಾಜ್ ಕುಮಾರ್ ಸಮಾಧಿ ,ಪುನೀತ್ ರಾಜ್ ಕುಮಾರ್ ಸಮಾಧಿ ಮತ್ತು ಪಾರ್ವತಮ್ಮ ಸಮಾಧಿ ಸ್ಥಳವನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಲಾಗಿದೆ.

ಕಂಠೀರವ ಸ್ಟುಡಿಯೋದಲ್ಲಿನ ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಮತ್ತು ಪಾರ್ವತಮ್ಮ ಸಮಾಧಿ ಸ್ಥಳವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ರಾಜ್ ಕುಟುಂಬದಿಂದ ಸಿದ್ದಪಡಿಸಿದ ಪಿಪಿಟಿಯನ್ನು ಕೂಡ ಸಿಎಂ ವೀಕ್ಷಣೆ ಮಾಡಿದ್ದಾರೆ. ಪಿಡಬ್ಲ್ಯುಡಿ ಇಲಾಖೆಯಿಂದ ಈ ಯೋಜನೆಗೆ ಅಂದಾಜು ಮೊತ್ತ ತರಿಸಲು ಸಿಎಂ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.