Sunday, September 20, 2026

BDA Apartments

ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಮಾಜಿ ಸಿಎಂ ಸಿದ್ಧರಾಮ...
Home Front Page ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಮಾಜಿ ಸಿಎಂ ಸಿದ್ಧರಾಮಯ್ಯ.

ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಮಾಜಿ ಸಿಎಂ ಸಿದ್ಧರಾಮಯ್ಯ.

ಚಿಕ್ಕಮಗಳೂರು,ಆಗಸ್ಟ್,19,2022(www.justkannada.in):  ನಿನ್ನೆ ಕೊಡಗಿನಲ್ಲಿ  ಇಂದು ಪ್ರವಾಸ ಕೈಗೊಂಡು ಸರಣಿ ಪ್ರತಿಭಟನೆ ಎದುರಿಸಿದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಇದೀಗ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಇದೇ ಮೊದಲ ಬಾರಿಗೆ ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಂಭಾಪುರಿ ಶ್ರೀಗಳು ರುದ್ರಾಕ್ಷಿ ಮಾಲೆ ಹಾಕಿದ್ದಾರೆ.

ರಂಭಾಪುರಿ ಪೀಠದ ಶ್ರೀ ಪ್ರಸನ್ನ ವೀರ ಸೋಮೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದ ಸಿದ್ದರಾಮಯ್ಯ ಅವರು ವೀರಭದ್ರನಾಥ ಸ್ವಾಮಿ, ರೇಣುಕಾಚಾರ್ಯರ ಗದ್ದುಗೆಯ ದರ್ಶನ ಸಹ ಪಡೆದರು. ಅದಕ್ಕೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಶೃಂಗೇರಿ ಶಾರದಾಂಬೆ ದರ್ಶನ ಪಡೆದರು.

ಹೀಗೆ ಸರಣಿ  ಪ್ರತಿಭಟನೆ ನಡುವೆ ಮಾಜಿ ಸಿಎಂ ಸಿದ್ಧರಾಮಯ್ಯ ಮಠ ಮತ್ತು ದೇವಸ್ಥಾನಗಳಿಗೆ ಭೇಟಿ ನೀಡಿದರು.ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಮಾಜಿ ಸಿಎಂ ಸಿದ್ಧರಾಮ...

Key words: Former CM –Siddaramaiah- visited -Rambhapuri Math