Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲಾ ಪ್ರವಾಸ

ಬೆಂಗಳೂರು, ಆಗಸ್ಟ್ 21, 2022 (www.justkannada.in): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹಾವೇರಿ ಜಿಲ್ಲಾ ಪ್ರವಾಸಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಶಿಗ್ಗಾಂವಿಗೆ ಆಗಮಿಸಿ ಕೋಟ್ ಆವರಣದಲ್ಲಿ ಆಯೋಜಿಸಿರುವ ವಕೀಲರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 12-45ಕ್ಕೆ ಸವಣೂರ ಕೋಟ್ ಆವರಣದಲ್ಲಿ ವಕೀಲರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮಧ್ಯಾಹ್ನ 2-15ಕ್ಕೆ ಸವಣೂರಿನಿಂದ ಹಾವೇರಿಗೆ ಆಮಿಸಲಿದ್ದಾರೆ. ಮಧ್ಯಾಹ್ನ 3-30 ಗಂಟೆಗೆ ಹಾವೇರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 5-30ಕ್ಕೆ ಹಾವೇರಿ ಪ್ರವಾಸಿ ಮಂದಿರದ ಹತ್ತಿರ ಸಂಚಾರಿ ಪೊಲೀಸ್ ಠಾಣೆ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. 5-45ಕ್ಕೆ ಹಾವೇರಿಯಿಂದ ಪ್ರಯಾಣಬೆಳೆಸಿ ಶಿಗ್ಗಾಂವ ಮಾರ್ಗವಾಗಿ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.