Thursday, August 13, 2026

BDA Apartments

Home Front Page ಕೇಂದ್ರದಿಂದ ಹೆಚ್ಚು ಅನುದಾನ ಸಿಗುವ ಭರವಸೆ ಇದೆ- ಸಾಗರದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…

ಕೇಂದ್ರದಿಂದ ಹೆಚ್ಚು ಅನುದಾನ ಸಿಗುವ ಭರವಸೆ ಇದೆ- ಸಾಗರದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…

ಶಿವಮೊಗ್ಗ,ಆ,13,2019(www.justkannada.in):  ನೆರೆ ಸಂತ್ರಸ್ತರ ಪರಿಹಾರಕ್ಕೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ಸಿಗುವ ವಿಶ್ವಾಸವಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಶಿವವೊಗ್ಗ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿಪರಿಶೀಲನೆ ನಡೆಸುತ್ತಿದ್ದಾರೆ. ಈ ನಡುವೆ ಸಾಗರದಲ್ಲಿ ಮಾತನಾಡಿದ ಸಿಎಂ ಬಿಎಸ್ ವೈ, ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಿಮ್ಮ ಜತೆ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಇದೆ ಎಂದು ನೆರೆ ಸಂತ್ರಸ್ತರಿಗೆ ಅಭಯ ನೀಡಿದರು.

ಹಾಗೆಯೇ ಹೆಚ್.ಡಿ ದೇವೇಗೌಡರು, ಸಿದ್ಧರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ಎಲ್ಲಾ ಪಕ್ಷದ ಶಾಸಕರು ಮತ್ತು ಅಧಿಕಾರಿಗಳು ನೆರೆ ಪರಿಹಾರ ಕಾರ್ಯಾಚರಣೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಕೇಂದ್ರದಿಂದ ಅನುದಾನ ಬಿಡುಗಡೆಯಾಗಬೇಕು. ಸಮಸ್ಯೆ ಪರಿಹಾರ ಆಗಬೇಕು ಎಂದರು.

ಇನ್ನು ಸಾಗರಕ್ಕೆ ಮೊದಲ ಕಂತಿನಲ್ಲಿ 5 ಕೋಟಿ ರೂ ಬಿಡುಗಡೆ ಮಾಡುತ್ತೇನೆ. ನಂತರ ಹೆಚ್ಚುವರಿ ಹಣ ಬಿಡುಗಡೆ ಮಾಡುವುದಾಗಿ ಸಿಎಂ ಬಿಎಸ್ ವೈ ತಿಳಿಸಿದರು.

Key words: hope -grants – Center- Relief money- CM BS Yeddyurappa-shimoga