Sunday, August 2, 2026

BDA Apartments

Home Front Page ಮುರುಘ ಶ್ರೀಗಳ ಬಂಧನಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ.

ಮುರುಘ ಶ್ರೀಗಳ ಬಂಧನಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ.

ಮೈಸೂರು,ಸೆಪ್ಂಬರ್,1,2022(www.justkannada.in):  ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಹಿನ್ನೆಲೆ ಚಿತ್ರದುರ್ಗದ ಮುರುಘಶ್ರೀಗಳನ್ನ ಬಂಧಿಸವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ವಿದ್ಯಾರ್ಥಿನೀಯರ ಮೇಲೆ ದೌರ್ಜನ್ಯ ಖಂಡಿಸಿ ನಗರದ ಟೌನ್ ಹಾಲ್ ಬಳಿ ಅಂಬೇಡ್ಕರ್ ಪ್ರತಿಮೆ ಬಳಿ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.  ಹಾಗೆಯೇ ಬಿಜೆಪಿ ಸರ್ಕಾರದ ವಿರುದ್ಧವೂ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಫೋಕ್ಸೋ ಕಾಯಿದೆ ಅಡಿ ಸ್ವಾಮಿಜೀಯನ್ನ ಬಂದಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ನಾಳೆ ವಿಚಾರಣೆ ನಡೆಯಲಿದೆ.

Key words: Protest – Mysore -demanding – arrest -Mr. Muruga shri