ಮಂಗಳೂರು,ಸೆಪ್ಟಂಬರ್,2,2022(www.justkannada.in): ಪೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಇಂತಹ ಘಟನೆ ನಡೆಯಬಾರದಿತ್ತು ನಡೆದಿದೆ. ಶ್ರೀಗಳ ಬಂಧನ ಪ್ರಕರಣ ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ ನಾನು ಹೆಚ್ಚು ಮಾತನಾಡಲು ಹೋಗಲ್ಲ. ಮುರುಘ ಶ್ರೀಗಳ ಬಂಧನದ ಬಗ್ಗೆ ಹೆಚ್ಚು ಚರ್ಚೆ ಮಾಡಲ್ಲ ಎಂದರು.
ಇನ್ನು ಮುರುಘಾ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Muruga shri- Arrest-case-Former CM-BS yeddyurappa






