Thursday, September 17, 2026

BDA Apartments

ಮೂರು ದಿನಗಳ ಕಾಲ ಮುರುಘಾ ಶ್ರೀಗಳನ್ನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್ BDA JK_Adv B...
Home Crime ಮೂರು ದಿನಗಳ ಕಾಲ ಮುರುಘಾ ಶ್ರೀಗಳನ್ನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್.

ಮೂರು ದಿನಗಳ ಕಾಲ ಮುರುಘಾ ಶ್ರೀಗಳನ್ನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್.

ಚಿತ್ರದುರ್ಗ,ಸೆಪ್ಟಂಬರ್,2,2022(www.justkannada.in): ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ನಿನ್ನೆ ಬಂಧಿತರಾಗಿದ್ಧ ಮುರುಘಾ ಮಠದ ಶ್ರೀಗಳನ್ನ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಹಿನ್ನೆಲೆ ನಿನ್ನೆ ಮುರುಘಾ ಶ್ರೀಗಳನ್ನ ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಈ ನಡುವೆ ಮುರುಘಾ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.ಮೂರು ದಿನಗಳ ಕಾಲ ಮುರುಘಾ ಶ್ರೀಗಳನ್ನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್ muruga shri

ಬಂಧನದ ನಂತರ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಕಂಡ ಹಿನ್ನೆಲೆ ಕೋರ್ಟ್​ಗೆ ಮಾಹಿತಿಯನ್ನೂ ನೀಡದೆ ನೇರವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನು ಪ್ರಶ್ನಿಸಿದ ಕೋರ್ಟ್, ಕೂಡಲೇ ಆರೋಪಿಯನ್ನು ಕೋರ್ಟ್ ಮುಂದೆ ಹಾಜರುಪಡಿಸುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮುರುಘಾ ಶ್ರೀಗಳನ್ನ ಕೋರ್ಟ್ ಗೆ ಹಾಜರು ಪಡಿಸಿ 5 ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ಈ ನಡುವೆ ಕೋರ್ಟ್ ಸೆಪ್ಟಂಬರ್ 5ರವರೆಗೆ ಶ್ರೀಗಳನ್ನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.

Key words: Muruga shri- police -custody – three days- court