Sunday, September 13, 2026

BDA Apartments

ಹಳ್ಳದಲ್ಲಿ ಕೊಚ್ಚಿ ಹೋಗಿದ್ಧ ಓರ್ವ ಪೊಲೀಸ್ ಸಿಬ್ಬಂದಿ ಮೃತದೇಹ ಪತ್ತೆ: ಮತ್ತೊ...
Home Crime ಹಳ್ಳದಲ್ಲಿ ಕೊಚ್ಚಿ ಹೋಗಿದ್ಧ ಓರ್ವ ಪೊಲೀಸ್ ಸಿಬ್ಬಂದಿ ಮೃತದೇಹ ಪತ್ತೆ: ಮತ್ತೊಬ್ಬ ಸಿಬ್ಬಂದಿಗಾಗಿ ಶೋಧ ಕಾರ್ಯ.

ಹಳ್ಳದಲ್ಲಿ ಕೊಚ್ಚಿ ಹೋಗಿದ್ಧ ಓರ್ವ ಪೊಲೀಸ್ ಸಿಬ್ಬಂದಿ ಮೃತದೇಹ ಪತ್ತೆ: ಮತ್ತೊಬ್ಬ ಸಿಬ್ಬಂದಿಗಾಗಿ ಶೋಧ ಕಾರ್ಯ.

ಕೊಪ್ಪಳ, ಸೆಪ್ಟಂಬರ್,9,2022(www.justkannada.in): ಹಳ್ಳದಲ್ಲಿ ಕೊಚ್ಚಿ ಹೋಗಿದ್ಧ  ಇಬ್ಬರು ಪೊಲೀಸ್ ಸಿಬ್ಬಂದಿಯ ಪೈಕಿ ಓರ್ವ ಸಿಬ್ಬಂದಿಯ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗದಗ ಜಿಲ್ಲೆ ಗಜೇಂದ್ರಗಡಕ್ಕೆ ಬಂದೋಬಸ್ತ್​​ ಗೆ ತೆರಳಿದ್ದ ಇಬ್ಬರು ಪೊಲೀಸ್ ಕಾನ್ಸ್ಟೇಬಲ್​ಗಳು ಹಳ್ಳದಲ್ಲಿ ಕೊಚ್ಚಿಹೋದ ಘಟನೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದ ಬಳಿ ನಡೆದಿದೆ. ರೈತರ ಪ್ರತಿಭಟನೆ ಹಿನ್ನೆಲೆ ಪೊಲೀಸ್ ಸಿಬ್ಬಂದಿಗಳಾದ ಮಹೇಶ್ ಮತ್ತು ನಿಂಗಪ್ಪ ಅವರು ಭದ್ರತೆಗೆ ತೆರಳಿದ್ದರು. ಈ ನಡುವೆ ನಿನ್ನೆ ರಾತ್ರಿ ಹಿಂದಿರುಗುವಾಗ ಹಳ್ಳದಲ್ಲಿ ಕೊಚ್ಚಿಹೋಗಿದ್ದರು.ಹಳ್ಳದಲ್ಲಿ ಕೊಚ್ಚಿ ಹೋಗಿದ್ಧ ಓರ್ವ ಪೊಲೀಸ್ ಸಿಬ್ಬಂದಿ ಮೃತದೇಹ ಪತ್ತೆ water death water

ಇದೀಗ ನಿಂಗಪ್ಪ ಅವರ ಮೃತದೇಹ ಪತ್ತೆಯಾಗಿದ್ದು ಮಹೇಶ್ ಗಾಗಿ ಶೋಧ ಕಾರ್ಯವನ್ನ ಅಗ್ನಿಶಾಮಕ ದಳದ ಸಿಬ್ಬಂದಿ ಮುಂದುವರೆಸಿದ್ದಾರೆ.

Key words: koppal- Dead body – police- found