Saturday, August 15, 2026

BDA Apartments

Home Crime ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ.

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ.

ಚಿತ್ರದುರ್ಗ,ಸೆಪ್ಟಂಬರ್,14,2022(www.justkannada.in):  ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ನ್ಯಾಯಾಂಗ ಬಂಧನದ ಅವಧಿಯನ್ನ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ವಿಸ್ತರಣೆ ಮಾಡಿದೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಅಂತ್ಯವಾಗಿತ್ತು. ಇದೀಗ ಮತ್ತೆ 14 ದಿನಗಳ ಕಾಲ ಅಂದರೆ ಸೆಪ್ಟಂಬರ್ 27ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನ ವಿಸ್ತರಣೆ ಮಾಡಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ಇನ್ನು ಎ2 ಆರೋಪಿ ಹಾಸ್ಟೆಲ್  ಲೇಡಿ ವಾರ್ಡನ್ ನ್ಯಾಯಾಂಗ ಬಂಧನವನ್ನೂ ಸಹ ವಿಸ್ತರಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನ 3ಗಂಟೆಗೆ ನಡೆಯಲಿದೆ.

Key words: POCSO case- Muruga Shri – judicial custody – 14 days -again.