Saturday, August 15, 2026

BDA Apartments

Home Crime ಲಂಚ ಸ್ವೀಕರಿಸುತ್ತಿದ್ದ ವೇಳೆ ಉಪನಿಬಂಧಕರ ಕಚೇರಿ ಹಿರಿಯ ನಿರೀಕ್ಷಕ ಲೋಕಾಯುಕ್ತ ಬಲೆಗೆ.

ಲಂಚ ಸ್ವೀಕರಿಸುತ್ತಿದ್ದ ವೇಳೆ ಉಪನಿಬಂಧಕರ ಕಚೇರಿ ಹಿರಿಯ ನಿರೀಕ್ಷಕ ಲೋಕಾಯುಕ್ತ ಬಲೆಗೆ.

ಕೊಡಗು,ಸೆಪ್ಟಂಬರ್,16,2022(www.justkannada.in): ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಉಪನಿಬಂಧಕರ ಕಚೇರಿ ಹಿರಿಯ ನಿರೀಕ್ಷಕ  ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಹಿರಿಯ ನಿರೀಕ್ಷಕ ಮಂಜುನಾಥ್ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಸಂಘದ ಬಳಿ  ಮಂಜುನಾಥ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸಂಘದ ನೋಂದಣಿಗೆ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು, 8 ಸಾವಿರ ರೂ. ಸ್ವೀಕರಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮಂಜುನಾಥ್ ಅವರನ್ನ ವಶಕ್ಕೆ ಪಡೆದರು.

Key words: Lokayukta  caught -Senior Inspector – accepting -bribes.