Sunday, September 6, 2026

BDA Apartments

Home Front Page ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ ಮತ್ತು ಸಚಿವರು.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ ಮತ್ತು ಸಚಿವರು.

ಬೆಂಗಳೂರು,ಸೆಪ್ಟಂಬರ್,21,2022(www.justkannada.in): ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಅವರನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಮತ್ತು ಸಚಿವರು ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಬೆಂಗಳೂರಿನ ಅವರ ಪದ್ಮನಾಭ ನಗರದ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಹೆಚ್.ಡಿ ದೇವೇಗೌಡರ ಆರೋಗ್ಯ ವಿಚಾರಿಸಿದರು. ಸಿಎಂಗೆ ಸಚಿವರಾದ ಆರ್‌. ಅಶೋಕ್, ವಿ.‌ಸೋಮಣ್ಣ, ಬೈರತಿ ಬಸವರಾಜ್, ಮುನಿರತ್ನ, ಗೋಪಾಲಯ್ಯ ಜೆ.ಸಿ. ಮಾಧುಸ್ವಾಮಿ ಸಾಥ್ ನೀಡಿದರು.

ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ ಆಗಿದೆ. ಹೆಚ್.ಡಿಡಿ ಅವರು ಅನುಭವಗಳನ್ನ ಹಂಚಿಕೊಂಡಿದ್ದಾರೆ.  ರಾಜ್ಯದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು.  ಈ ಹಿಂದೆ ಹೆಚ್.ಡಿ ದೇವೇಗೌಡರು ನಾವು ಒಟ್ಟಿಗೆ ಕೆಲಸ ಮಾಡಿದ್ದವು. ಬಹಳ ಆತ್ಮೀಯವಾಗಿ ಮಾತನಾಡಿದರು ಅವರ ಸಲಹೆ ಸೂಚನೆ ಮಾರ್ಗದರ್ಶನ ಅಗತ್ಯವಿದೆ ಎಂದರು.

Key words: former PM-HD devegowda-cm-Basavaraja bommai-meet